Election NewsKannada NewsKarnataka NewsPolitics

*ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ಶುರು: 14 ಶಾಸಕರು ರೆಸಾರ್ಟ್ ಗೆ ಶಿಪ್ಟ್*

ಪ್ರಗತಿವಾಹಿನಿ ಸುದ್ದಿ: ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದೆ. 

ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ 14 ಜನ‌ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಗುರುವಾರ ರಾತ್ರಿ ಭುವನೇಶ್ವರದಿಂದ ವಿಮಾನದ ಮೂಲಕ ಒಡಿಶಾದ ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಬೆಂಗಳೂರಿಗೆ ಆಗಮಿಸಿದರು. 

Home add -Advt

ವಿಮಾನ ನಿಲ್ದಾಣದಿಂದ ಪೊಲೀಸ್ ಬಂದೋಬಸ್ತ್ ಮತ್ತು ಎಸ್ಕಾರ್ಟ್ ವ್ಯವಸ್ಥೆಯೊಂದಿಗೆ ಶಾಸಕರನ್ನು ನೇರವಾಗಿ ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ವಂಡರ್ ಲಾ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. 

ಈ ತಂಡದಲ್ಲಿ ಶಾಸಕರಾದ ಮಂಗು ಖಿಲಾ, ಅಪ್ಪಲ ಸ್ವಾಮಿ, ರಾಜನ್ ಎಕ್ಕಾ, ಅಶೋಕ್ ಕುಮಾರ್ ಸೇರಿದಂತೆ ಹಲವು ನಾಯಕರು ಇದ್ದಾರೆ. ಜೊತೆಗೆ ಮಾಜಿ ಸಂಸದ ಭಕ್ತ ಚರಣ್ ದಾಸ್ ಹಾಗೂ ಕಾಂಗ್ರೆಸ್ ವಕ್ತಾರ ದುರ್ಗಾ ಪ್ರಸಾದ್ ಪಾಂಡಾ ಸೇರಿ ಒಟ್ಟು ಸುಮಾರು 14 ಮಂದಿ ಬೆಂಗಳೂರಿಗೆ ಬಂದಿದ್ದಾರೆ ಎಂದು ತಿಳಿದುಬಂದಿದೆ.

147 ಸದಸ್ಯ ಬಲದ ಒಡಿಶಾ ವಿಧಾನಸಭೆಯಲ್ಲಿ ಬಿಜೆಡಿ 50 ಸ್ಥಾನಗಳನ್ನು ಹೊಂದಿದ್ದರೆ, ಕಾಂಗ್ರೆಸ್ ಬಳಿ 14 ಶಾಸಕರು ಇದ್ದಾರೆ. ಬಿಜೆಪಿ 79 ಶಾಸಕರ ಬೆಂಬಲ ಹೊಂದಿದೆ.

https://pragativahini.com/fines-and-punishment-for-violating-rules-warning-to-tobacco-selle

Related Articles

Back to top button