Kannada NewsKarnataka NewsLatest

*BREAKING: ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 9ನೇ ತರಗತಿ ವಿದ್ಯಾರ್ಥಿ*

ಪ್ರಗತಿವಾಹಿನಿ ಸುದ್ದಿ: ಮೊಬೈಲ್ ನೋಡುತ್ತಾ ಕಾಲಹರಣ ಮಾಡಬೇಡ. ಚನ್ನಾಗಿ ಓದು ಎಂದು ಬೈದು ಬುದ್ಧಿ ಹೇಳಿದ್ದಕ್ಕೆ ಮನನೊಪ್ಂದ ೯ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಘಟನೆ ನಡೆದಿದೆ. ಪರೀಕ್ಷೆ ಸಮಯದಲ್ಲಿ ಮೊಬೈಲ್ ನೋಡಬೇಡ ಎಂದು ಪೋಷಕರು ಬೈದಿದ್ದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

Home add -Advt

ಶುಭಂ ನಾಗೇಶ್ ನಾಯ್ಕ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಶಿರಸಿಯ ಮಾರಿಕಾಂಬ ಫೌಢ ಶಾಲೆಯಲ್ಲಿ ಓದುತ್ತಿದ್ದ. ಬೈದಿದ್ದಕ್ಕೆ ಮನೆಯಲ್ಲಿ ಯಾರೂ ಇಲ್ಲದವೇಳೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಬಾಲಕ ಸಾವನ್ನಪ್ಪಿದ್ದ.

ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button