Belagavi NewsBelgaum NewsKannada NewsKarnataka News

*ಯುಗಾದಿ ಹಬ್ಬ: ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ* 

ಪ್ರಗತಿವಾಹಿನಿ ಸುದ್ದಿ: ಮುಂಬರುವ ಯುಗಾದಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಕರ್ನಾಟಕದ ವಿವಿಧ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.

ಈ ವಿಶೇಷ ರೈಲುಗಳ ವಿವರ ಹೀಗಿದೆ

ರೈಲು ಸಂಖ್ಯೆ 06503/06504 ಎಸ್‌ಎಂವಿಟಿ. ಬೆಂಗಳೂರು–ಬೆಳಗಾವಿ–ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ 

ರೈಲು ಸಂಖ್ಯೆ 06503 ಮಾರ್ಚ್ 18ರಂದು ಸಂಜೆ 7ಕ್ಕೆ ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ ಹೊರಟು, ಮರುದಿನ ಬೆಳಿಗ್ಗೆ 7.35ಕ್ಕೆ ಬೆಳಗಾವಿ ತಲುಪಲಿದೆ. ಹಾಗೆಯೇ, ರೈಲು ಸಂಖ್ಯೆ 06504 ಮಾರ್ಚ್ 22ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 5 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ. ಈ ರೈಲು ಎರಡೂ ದಿಕ್ಕುಗಳಲ್ಲಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. 

Home add -Advt

ಈ ರೈಲು 2 ಎಸಿ 2-ಟೈರ್, 4 ಎಸಿ 3-ಟೈರ್, 7 ಸ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್‌ಡಿ ಸೇರಿದಂತೆ ಒಟ್ಟು 19 ಬೋಗಿಗಳನ್ನು ಹೊಂದಿರುತ್ತದೆ.

ರೈಲು ಸಂಖ್ಯೆ 06277/06278 ಯಶವಂತಪುರ–ವಿಜಯಪುರ–ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್

ರೈಲು ಸಂಖ್ಯೆ 06277 ಮಾರ್ಚ್ 18ರಂದು (ಬುಧವಾರ) ರಾತ್ರಿ 09:50ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 09:45ಕ್ಕೆ ವಿಜಯಪುರ ತಲುಪಲಿದೆ. ಮರು ಪ್ರಯಾಣದಲ್ಲಿ ರೈಲು ಸಂಖ್ಯೆ 06278 ಮಾರ್ಚ್ 22ರಂದು (ಭಾನುವಾರ) ಮಧ್ಯಾಹ್ನ 01:30ಕ್ಕೆ ವಿಜಯಪುರದಿಂದ ಹೊರಟು, ಮರುದಿನ ಮಧ್ಯರಾತ್ರಿ 12:30ಕ್ಕೆ ಯಶವಂತಪುರ ಸೇರಲಿದೆ. ಈ ರೈಲು ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣೇಬೆನ್ನೂರು, ಎಸ್‌ಎಂಎಂ ಹಾವೇರಿ, ಬದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲ್ಲಲಿದೆ.

ರೈಲು ಸಂಖ್ಯೆ 07379 ಎಸ್‌ಎಸ್‌ಎಸ್ ಹುಬ್ಬಳ್ಳಿ–ಯಶವಂತಪುರ ಒನ್-ವೇ ವಿಶೇಷ ಎಕ್ಸ್‌ಪ್ರೆಸ್

ಮಾರ್ಚ್ 18ರಂದು (ಬುಧವಾರ) ಈ ಏಕಮುಖ ವಿಶೇಷ ರೈಲು ಸಂಚರಿಸಲಿದೆ. ಇದು ಮಧ್ಯಾಹ್ನ 12ಕ್ಕೆ ಹುಬ್ಬಳ್ಳಿಯಿಂದ ಹೊರಟು, ಅಂದು ರಾತ್ರಿ 08:15ಕ್ಕೆ ಯಶವಂತಪುರ ತಲುಪಲಿದೆ. ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲ್ಲಲಿದೆ. 

ರೈಲುಗಳ ಸಂಖ್ಯೆ 06277/78 ಮತ್ತು 07379 ಒಟ್ಟು 21 ಬೋಗಿಗಳನ್ನು ಹೊಂದಿರಲಿದ್ದು, ಇದರಲ್ಲಿ 1 ಎಸಿ 2-ಟೈರ್, 4 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್‌ಡಿ ಬೋಗಿಗಳಿರಲಿವೆ.

ರೈಲು ಸಂಖ್ಯೆ 06267/06268 ಯಶವಂತಪುರ–ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ 

ರೈಲು ಸಂಖ್ಯೆ 06267 ಮಾರ್ಚ್ 18ರಂದು (ಬುಧವಾರ) ಮಧ್ಯಾಹ್ನ 12ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 06:45ಕ್ಕೆ ಮಡಗಾಂವ್ ತಲುಪಲಿದೆ. ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲ್ಲಲಿದೆ. ಮರಳಿ ಬರುವಾಗ ರೈಲು ಸಂಖ್ಯೆ 06268 ಮಾರ್ಚ್ 19ರಂದು (ಗುರುವಾರ) ಬೆಳಿಗ್ಗೆ 11ಕ್ಕೆ ಮಡಗಾಂವ್‌ನಿಂದ ಹೊರಟು, ಮರುದಿನ ಬೆಳಿಗ್ಗೆ 05:20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಇದು ಮರಳುವಾಗ ಮೇಲಿನ ಎಲ್ಲಾ ನಿಲ್ದಾಣಗಳ ಜೊತೆಗೆ ಎಸ್‌ಎಂವಿಟಿ ಬೆಂಗಳೂರು ನಿಲ್ದಾಣದಲ್ಲೂ ನಿಲುಗಡೆ ಹೊಂದಿರಲಿದೆ. ಈ ರೈಲು 20 ಸ್ಲೀಪರ್ ಕ್ಲಾಸ್, 2 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್‌ಡಿ ಬೋಗಿಗಳನ್ನು ಹೊಂದಿರುತ್ತದೆ.

Related Articles

Back to top button