Kannada NewsKarnataka NewsLatest

*ಕೆ.ಎಸ್.ಆರ್.ಟಿ.ಸಿ ಬಸ್-ಕಾರು ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿಘಾಟ್ ನಲ್ಲಿ ಈ ದುರಂತ ಸಂಭವಿಸಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಸಕಲೇಶಪುರಕ್ಕೆ ಮದುವೆಗೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತ ದುರ್ದೈವಿಗಳು.

ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button