Kannada NewsKarnataka NewsLatest

*ಜಿಲ್ಲಾಧಿಕಾರಿ, ಎಡಿಸಿ ಸಹಿ ದುರುಪಯೋಗ: ನಕಲಿ ಬಿಲ್ ಸೃಷ್ಟಿಸಿದ ಐವರು ನೌಕರರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಅಧಿಕಾರಿಗಳ ಡಿಜಿಟಲ್ ಸಹಿ ದುರುಪಯೋಗ ಮಾಡಿ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗದಲ್ಲಿ ಈ ಘಟನೆ ನಡೆದಿದೆ. ಜಿಲ್ಲಾಧಿಕಾರಿ ಹಾಗೂ ಎಡಿಸಿ ಅವರ ಡಿಜಿಟಲ್ ಸಹಿ ದುರುಪಯೋಗ ಪಡಿಸಿಕೊಂಡು 15 ಲಕ್ಷ ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಆರು ನೌಕರರು ಜಿಲ್ಲಾ ಖಜಾನೆಗೆ ಕಳುಹಿಸಿದ್ದರು.ಈ ವೇಳೆ ಸಹಿ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಖಜಾನೆ ಇಲಾಖೆಯಿಂದ ಆಕ್ಷೇಪಣೆ ಬಂದಿತ್ತು. ಈ ವೇಳೆ ಪರಿಶೀಲಿಸಿದಾಗ ವಂಚನೆ ಬೆಳಕಿಗೆ ಬಂದಿದೆ.

Home add -Advt

ನಗರಾಭಿವೃದ್ಧಿ ಕೋಶದ ನಿರ್ದೇಶಕಿ ರೇಷ್ಮಾ ಹಾನಗಲ್ ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಗರಾಭಿವೃದ್ಧಿ ಇಲಾಖೆಯ ನೌಕರ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ್, ಮೆಹಬೂಬ್ ಬಾಷಾ ಹಾಗೂ ವೆಂಕಟೇಶ್ ಎಂಬ ಆರು ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಇವರಲ್ಲಿ ಸೈಯದ್ ಸಾದಿಕ್ ತಲೆಮರೆಸಿಕೊಂಡಿದ್ದು, ಉಳಿದ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

Related Articles

Back to top button