Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ: ಬೆಂಗಳೂರಿನಲ್ಲಿ ಇನ್ನಷ್ಟು ಹೆಚ್ಚಲಿದೆ ತಾಪಮಾನ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಹಲವು ದಿನಗಳಿಂದ ಬಿಸಿಲ ಝಳ ದಿನದಿಂದ ದಿನಕ್ಕೆ ಏರುತ್ತಿದೆ. ಅದರಲ್ಲಿಯೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಣ ಬಿಸಿಲಿನಿಂದ ಜನರು ತತ್ತಪಿಸುತ್ತಿದ್ದಾರೆ. ಈ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದೂ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿನ್ನೆ ಚಿಕ್ಕಮಗಳೂರು, ಹಾಸನ, ಬೆಳಗಾವಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ಭಾರಿ ಮಳೆಯಾಗಿದೆ. ಇಂದು ಕರಾವಳಿ ಜಿಲ್ಲೆಗಳು ಸೇರಿ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿಯ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.ಕೊಡಗು, ಮೈಸೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಾಮರಾಜನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ.

Home add -Advt

ರಾಯಚೂರು, ಯಾದಗಿರಿ,ಕೊಪ್ಪಳ, ಕಲಬುರಗಿ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ತಾಪಮಾನ ಮತ್ತಷ್ಟು ಹೆಚ್ಚಲಿದ್ದು, ಹೋಟ್ ಸ್ಟ್ರೋಕ್ ಆಗುವ ಸಾಧ್ಯತೆ ಇದೆ. ಹಾಗಾಗಿ ಜನರು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮನೆ, ಕಚೇರಿಗಳಿಂದ ಅನಗತ್ಯವಾಗಿ ಹೊರಗೆ ಹೋಗಬೇಡಿ. ಬಿಸಿಲ ಜಳಕ್ಕೆ ಡಯೇರಿಯಾ, ಬೇಧಿ, ಜ್ವರದಂತಹ ಅನಾರೋಗ್ಯವುಂಟಾಗುವ ಸಾಧ್ಯತೆಯಿದೆ ಎಂದು ಸೂಚಿಸಲಾಗಿದೆ.


Related Articles

Back to top button