*ಪ್ರತಿಯೊಬ್ಬ ಕಾರ್ಯಕರ್ತರ ಪರಿಶ್ರಮವಿದ್ದಾಗ ಮಾತ್ರ ಪಕ್ಷದ ಬೆಳವಣಿಗೆ ಸಾಧ್ಯ : ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಎಲ್ಲರೂ ಸೇರಿ ಪಕ್ಷವನ್ನು ಇನ್ನಷ್ಟು ಔನ್ನತ್ಯಕ್ಕೇರಿಸೋಣ. ಮುಂದಿನ ದಿನಗಳಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ವಿಧಾನ ಸಭೆ, ಲೋಕಸಭೆಯಲ್ಲಿ ಸಹ ಕಾಂಗ್ರೆಸ್ ದಿಗ್ವಿಜಯ ಸಾಧಿಸುವಂತಾಗಬೇಕು. ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ಬೆಳಗಾವಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಬೆಳಗಾವಿ ನಗರ ಹಾಗೂ ಗ್ರಾಮಾಂತರ ಜಿಲ್ಲಾ ಪ್ರಚಾರ ಸಮಿತಿಯ ವತಿಯಿಂದ ನಡೆದ ಒಂದು ದಿನದ ತರಬೇತಿ ಕಾರ್ಯಾಗಾರ ಹಾಗೂ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಣ್ಣ ಪುಟ್ಟ ವ್ಯತ್ಯಾಸಗಳ ಬಗ್ಗೆ ಯಾರೂ ಬೇಸರ ಮಾಡಿಕೊಳ್ಳದೆ ಸರಿಪಡಿಸಿಕೊಂಡು ಮುನ್ನಡೆಯಬೇಕು. ಪ್ರತಿಯೊಬ್ಬ ಕಾರ್ಯಕರ್ತರ ಪರಿಶ್ರಮವಿದ್ದಾಗ ಮಾತ್ರ ಪಕ್ಷದ ಬೆಳವಣಿಗೆ ಸಾಧ್ಯ. ನಿರಂತರ ಜನಸಂಪರ್ಕದೊಂದಿಗೆ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸೋಣ ಎಂದು ಅವರು ಹೇಳಿದರು.
ಈ ವೇಳೆ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯಕುಮಾರ್ ಸೊರಕೆ, ವಿನಯ ನಾವಲಗಟ್ಟಿ, ರಾಜಾಸಲೀಂ ಕಾಶೀಮನವರ್, ಮುನೀರ್, ಶಂಭು ಶೆಟ್ಟಿ, ಸುಧೀರ್ ಕುಮಾರ್ ಮುರೊಳಿ, ಜಿಲ್ಲಾ ಪ್ರಚಾರ ಸಮಿತಿಯ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.



