Kannada NewsKarnataka NewsLatest

*ಕರವೇ ಪ್ರತಿಭಟನೆ ಬೆನ್ನಲ್ಲೇ ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ಇಂದು ನಡೆಯಬೇಕಿದ್ದ ನೈಋತ್ಯ ರೈಲ್ವೆ ವಿವಿಧ ಹುದ್ದೆಗಳ ಮುಂಬಡ್ತಿ ಪರೀಕ್ಷೆ ಮುಂದೂಡುಕೆಯಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಡೆಸಿದ ಪ್ರತಿಭಟನೆಗೆ ಮಣಿದ ರೈಲ್ವೆ ಇಲಾಖೆ, ಗೂಡ್ಸ್ ಮ್ಯಾನೇಜರ್ ಎಲ್‌ಡಿಸಿ ಹುದ್ದೆಗಳಿಗಾಗಿ ಮಾರ್ಚ್ 17 ರಂದು ನಡೆಸಲಿದ್ದ ಮುಂಬಡ್ತಿ ಪರೀಕ್ಷೆಯನ್ನು ಮುಂದೂಡಿದೆ.

Home add -Advt

ಪರೀಕ್ಷಾ ಪ್ರಕ್ರಿಯೆಯಲ್ಲಿನ ಕೆಲವು ಅವ್ಯವಸ್ಥೆಗಳು ಮತ್ತು ಕನ್ನಡ ಭಾಷೆಗಳ ಕಡೆಗಣನೆ ಕುರಿತು ಕರವೇ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ತೀವ್ರ ಹೋರಾಟ ನಡೆಸಿದ್ದರು. ಹುಬ್ಬಳ್ಳಿ ಹಾಗೂ ಬೆಂಗಳುರಿನ ಪರೀಕ್ಷಾಅ ಕೇಂದ್ರಗಳಿಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಪರೀಕ್ಷೆಯನ್ನು ಮುಂದೂಡಲಾಗಿದೆ.

ಹಲವು ದಿನಗಳಿಂದ ಕರವೇ ಮುಖಂಡರು ಮತ್ತು ಸದಸ್ಯರು ರೈಲ್ವೆ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ ಇದ್ದರು. ಈ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ನ್ಯಾಯ ಒದಗಿಸುತ್ತಿಲ್ಲ ಎಂದು ಆರೋಪಿಸಿದ್ದರು. ಕರವೇ ಹೋರಾಟದ ಒತ್ತಡ ಹೆಚ್ಚಿದ ನಂತರ, ರೈಲ್ವೆ ಇಲಾಖೆಯು ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿತು. ಕರವೇ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ, ಈ ಮಹತ್ವದ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ತಾತ್ಕಾಲಿಕವಾಗಿ ಪರಿಸ್ಥಿತಿಯನ್ನು ತಿಳಿಗೊಳಿಸಿದೆ.

ಮುಂದೂಡಲ್ಪಟ್ಟ ಪರೀಕ್ಷೆ ಯಾವಾಗ ನಡೆಯಲಿದೆ ಎಂಬ ಬಗ್ಗೆ ಇನ್ನೂ ಪ್ರಕಟವಾಗಿಲ್ಲ.

Related Articles

Back to top button