Film & EntertainmentKarnataka NewsLatest

*ತೀವ್ರ ವಿವಾದಕ್ಕೆ ಗುರಿಯಾದ ಕೆಡಿ ಸಿನಿಮಾ ಐಟಂ ಸಾಂಗ್: ನಿರ್ದೇಶಕ ಪ್ರೇಮ್ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಕೆಡಿ ದಿ ಡೆವಿಲ್ ಸಿನಿಮಾದ ಐಟಂ ಸಾಂಗ್ ತೀವ್ರ ವಿವಾದಕ್ಕೆ ಕಾಅರಣವಾಗಿದೆ. ಹಾಡನ್ನು ಸಿನಿಮಾದಿಂದ ತೆಗೆದು ಹಾಕುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಗಳು ಕೇಳಿಬಂದಿವೆ.

ನಟ ಧ್ರುವ ಸರ್ಜಾ ಅಭಿನಯದ ಜೋಗಿ ಪ್ರೇಮ್ ನಿರ್ದೇಶನದ ಕೆಡಿ ಸಿನಿಮಾದ ಐಟಂ ಸಾಂಗ್ ಇತ್ತೀಚೆಗೆ ಬಿಡುಗಡೆಯಾಗಿತ್ತು. ಹಾಡಿನಲ್ಲಿ ಬಾಲಿವುಡ್ ನಟಿ ನೋರಾಫತೇಹಿ ಹಾಗೂ ಸಂಜಯ್ ದತ್ ಅಭಿನಯಿಸಿದ್ದಾರೆ. ಈ ಹಾಡಿನ ಸಾಹಿತ್ಯ ಹಾಗೂ ಅಶ್ಲೀಲ ನೃತ್ಯಗಳು ಜನಾಕ್ರೋಶಕ್ಕೆ ಕಾರಣವಾಗಿದೆ.

ಪ್ರೇಮ್ ಅವರಂತಹ ನಿರ್ದೇಶಕರು ಹಾಗೂ ಅರ್ಜುನ್ ಜನ್ಯ ಅವರು ಸಂಯೋಜಿಸಿರುವ ಈ ಹಾಡಿನ ಸಾಹಿತ್ಯ ತೀರಾ ಅಶ್ಲೀಲ ಪದಗಳಿಂದ, ಡಬಲ್ ಮೀನಿಂಗ್ ನಿಂದ ಕೂಡಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ.

ಈ ಹಾಡು ಕನ್ನಡ, ಹಿಂದಿ ಮತ್ರವಲ್ಲ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಕನ್ನಡದಲ್ಲಿ ‘ಸರ್ಸೆ ಸೆರಗ ಸರ್ಸೆ’ ಎಂದಿರುವ ಈ ಹಾಡು ಹಿಂದಿಯಲ್ಲಿ ‘ಸರ್ಕೆ ಚುನರ್’ ಎಂದಿದೆ. ಆದರೆ ಈ ಹಾಡಿನ ಸಾಹಿತ್ಯ ತೀವ್ರ ಟೀಕೆಗೆ ಗುರಿ ಆಗಿದ್ದು, ಹಾಡಿನ ವಿರುದ್ಧ ದೂರು ದಾಅಖಲಾಗಿದೆ.

Home add -Advt

ಹಾಡಿನಲ್ಲಿರುವ ನೋರಾ ಫತೇಹಿ ಹಾಗೂ ಸಂಜಯ್ ದತ್ ಅವರ ನೃತ್ಯದ ಭಂಗಿಗಳು ‘ಅತಿರೇಕದ ಅಶ್ಲೀಲತೆ’ಯಿಂದ ಕೂಡಿವೆ. ಅದರಲ್ಲೂ ಹಾಡಿನ ಸಾಹಿತ್ಯವಂತೂ ತೀರ ಅಶ್ಲೀಲವಾಗಿದೆ ಎನ್ನಲಾಗುತ್ತಿದೆ. ಹಿಂದಿ ಹಾಡಿನ ಸಾಹಿತ್ಯದ ಬಗ್ಗೆ ತೀವ್ರ ಟೀಕೆಗಳು ವ್ಯಕ್ತವಾಗಿದ್ದು, ದೆಹಲಿಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

ದೆಹಲಿಯ ವಕೀಲ ವಿನೀತ್ ಜಿಂದಾಲ್ ಎಂಬುವರು ಹಾಡಿನ ವಿರುದ್ಧ ಸಿಬಿಎಫ್​​ಸಿಗೆ ದೂರು ನೀಡಿದ್ದು, ಈ ಕೂಡಲೇ ಹಾಡನ್ನು ತೆಗೆಸಬೇಕು ಎಂದು ಮನವಿ ಮಾಡಿದ್ದಾರೆ. ವಕೀಲ ವಿನೀತ್ ಅವರು ದೆಹಲಿ ಸೈಬರ್ ಪೊಲೀಸರಿಗೂ ಸಹ ದೂರು ನೀಡಿದ್ದು, ಈ ಹಾಡಿನ ಸಾಹಿತ್ಯ ಬರೆದವರು, ಸಂಗೀತ ನಿರ್ದೇಶಕ, ಸಿನಿಮಾ ನಿರ್ದೇಶಕ ಮತ್ತು ನಿರ್ಮಾಪಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 294 (ಮಹಿಳೆಯ ಮಾನಕ್ಕೆ ಧಕ್ಕೆ) ಮತ್ತು ಪೋಕ್ಸೊ ಕಾಯ್ದೆಯ ಅಡಿ ಕೇಸು ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮುಂಬೈನ ವರ್ಲಿ ಪೊಲೀಸ್ ಠಾಣೆಯಲ್ಲಿಯೂ ಸಹ ಈ ಬಗ್ಗೆ ದೂರು ದಾಖಲಾಗಿದೆ. ಕೆಲವು ಗಾಯಕರು ಸಹ ಈ ಹಾಡಿನ ಸಾಹಿತ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ನಡುವೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದೆ. ಮಹಿಳೆಯರ ಘನತೆಗೆ ಧಕ್ಕೆ ತರುವಂತಹ ದೃಶ್ಯಗಳನ್ನು ಪ್ರದರ್ಶಿಸಿರುವುದನ್ನು ಆಯೋಗ ಪ್ರಶ್ನಿಸಿದೆ.

Related Articles

Back to top button