Belagavi NewsBelgaum NewsCrimeKannada NewsKarnataka NewsLatestNationalTravel

*ಆಂಧ್ರದಲ್ಲಿ ಅಪಘಾತ: ಬೆಳಗಾವಿ ಮೂಲದ ಮೂವರ ಸಾವು*

ಪ್ರಗತಿವಾಹಿನಿ ಸುದ್ದಿ: ಆಂಧ್ರದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದರ್ಶನ ಮಾಡಿ ಗ್ರಾಮಕ್ಕೆ ಮರಳುತ್ತಿದ್ದ ಬೆಳಗಾವಿ ತಾಲ್ಲೂಕಿನ ಯಕ್ಸಂಬಾ ಪಟ್ಟಣದ ಮೂವರು ಅಪಘಾತದಲ್ಲಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಯಕ್ಸಂಬಾ ಪಟ್ಟಣದ ನಿವಾಸಿಗಳಾದ ಅಜೀತ ಸಾತ್ವಾರ (28), ಗೌರವ ಶಹಾ (42), ಅಲಕಾ ಸಿಂಧೆ, (60)ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆಂಧ್ರಪ್ರದೇಶ ರಾಜ್ಯದ ಮಾರಕಾಪೂರ ಜಿಲ್ಲೆಯ ಕಂಬಾಮಾ ಗ್ರಾಮದ ಬಳಿಯಲ್ಲಿ ಅಪಘಾತ ಸಂಭವಿಸಿದೆ. ಕ್ರೂಸರ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. 14 ಜನ ಕ್ರೂಸರ್ ನಲ್ಲಿ ಪ್ರಯಾಣಿಸುತ್ತಿದ್ದರು. ಎಲ್ಲರೂ ಯಕ್ಸಂಬಾ ಪಟ್ಟಣದ ನಿವಾಸಿಗಳಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button