Belagavi NewsBelgaum NewsKannada NewsKarnataka NewsNationalPolitics
*ವಾಯುಭಾರ ಕುಸಿತ: ರಾಜ್ಯದಲ್ಲಿ ಮೂರ್ನಾಲ್ಕು ದಿನ ಮಳೆ*

ಪ್ರಗತಿವಾಹಿನಿ ಸುದ್ದಿ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಇಂದಿನಿಂದ ಮೂರ್ನಾಲ್ಕು ದಿನ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮೈಸೂರು, ಮಂಡ್ಯ ಚಾಮರಾಜನಗರ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಂಭವವಿದೆ. ಇನ್ನು ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಹುಬ್ಬಳ್ಳಿ-ಧಾರವಾಡದಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಮಳೆ ಬರುವ ಸಾಧ್ಯತೆ ಇದೆ. ಇದಲ್ಲದೆ ಬೀದರ್, ಕಲಬುರಗಿ, ರಾಯಚೂರು ನಗರದಲ್ಲಿ ತೀವ್ರ ಬಿಸಿಲಿನ ನಡುವೆಯೂ ಗುಡುಗು ಸಹಿತ ಹಗುರ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು ಹಗುರ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನವು 33°C ಮತ್ತು ಕನಿಷ್ಠ ತಾಪಮಾನವು 21°C ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.



