Belagavi NewsBelgaum NewsKarnataka NewsLatest
*ಬೆಳಗಾವಿಯಲ್ಲಿ ಬೆಂಕಿ ಅವಘಡ: 12 ಅಂಗಡಿಗಳು ಸುಟ್ಟು ಕರಕಲು*

ಪ್ರಗತಿವಾಹಿನಿ ಸುದ್ದಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ನಡೆದಿದೆ.
ಬೆಂಕಿ ಅವಘಡಕ್ಕೆ 12ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲಾಗಿವೆ. ಪ್ಯಾಟಿ ಓಣಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ.
ರಸಗೊಬ್ಬರ ಅಂಗಡಿ, ಹೊಟೆಲ್, ಫೋಟೋ ಸ್ಟೂಡಿಯೋ, ಐಸ್‌ಕ್ರೀಂ ಅಂಗಡಿಗಳು, ರೈತರ ನೀರಾವರಿ ಸಂಘದ ಕಚೇರಿ ಸೇರಿದಂತೆ ಹಲವು ವ್ಯಾಪಾರ ಮಳಿಗೆಗಳು ಬೆಂಕಿ ತಗುಲಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿವೆ.
ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

