
ಪ್ರಗತಿವಾಹಿನಿ ಸುದ್ದಿ: ಖತರ್ ಸೇನಾ ಹೆಲಿಕಾಪ್ಟರ್ ಪತನಗೊಂಡು 6 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ತಾಂತ್ರಿಕ ದೋಷದಿಂದಾಗಿ ಖತರ್ ಸಮುದ್ರ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನವಾಗಿದೆ. ಹೆಲಿಕಾಪ್ಟರ್ ನಲ್ಲಿ ಒಟ್ಟು 7 ಜನರು ಇದ್ದರು. ಅವರಲ್ಲಿ ೬ ಜನರು ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿದ್ದಾರೆ.
ನಾಪತ್ತೆಯಾದ ವ್ಯಕ್ತಿಗಾಗಿ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಸಂಘರ್ಷದ ನಡುವೆಯೇ ಈ ಘಟನೆ ನಡೆದಿದೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

