*ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸುತ್ತಿದ್ದ ಮೂವರಿಗೆ ಬಿಸಿ ಮುಟ್ಟಿಸಿದ ಬೆಳಗಾವಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾರ್ವಜನಿಕ ಸ್ಥಳದಲ್ಲಿ ಸರಾಯಿ ಸೇವಿಸುತ್ತಿದ್ದವರ ವಿರುದ್ಧ ಬೆಳಗಾವಿಯ ವಿವಿಧ ಪೊಲೀಸರು ಠಾಣಾ ವ್ಯಾಪ್ತಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ.
ಗಣಪತಿ ಯಲ್ಲಪ್ಪ ಹೊಸಮನಿ ಎಂಬಾತ ಮಾರಿಹಾಳ ಠಾಣೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ಆತನ ವಿರುದ್ಧ ಮಾರಿಹಾಳ ಪೊಲೀಸ್ ಠಾಣೆ ಪ್ರಕರಣ .36/2026 ಕಲಂ.15(A), 32(3) ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ.
ಕಾಡಪ್ಪ ಬಸವಣ್ಣಿ ವಾಲೀಕರ ಹಾಗೂ ದುರ್ಗಪ್ಪ ಬಾಬು ನಾಯಕ ಎಂಬ ಆರೋಪಿಗಳು ಭೂತರಾಮನಟ್ಟಿ ಗ್ರಾಮದ ಮುಕ್ತಿಮಠದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಸರಾಯಿ ಕುಡಿಯುತ್ತ ಕಾಕತಿ ಠಾಣೆಯ ಪೊಲೀಸರು ದಾಳಿ ಮಾಡಿ, ಆತನ ವಿರುದ್ಧ ಕಾಕತಿ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ.72/2026 ಕಲಂ.15(A) ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ. ತನಿಖೆ ಮುಂದುವರೆಸಲಾಗಿದೆ.
ಮೇಲಿನ ಪ್ರಕರಣದಲ್ಲಿ ಆರೋಪಿತರ ವಿರುದ್ಧ ಕಾನೂನು ಕ್ರಮ ಜರುಗಿಸಿದ ಪಿಎಸ್ಐ ಎಎಸ್ಐ, ಹಾಗೂ ಸಿಬ್ಬಂದಿಯವರ ಕಾರ್ಯವನ್ನು ನಗರ ಪೊಲೀಸ್ ಆಯುಕ್ತರು ಶ್ಲಾಘಿಸಿರುತ್ತಾರೆ.



