Kannada NewsKarnataka NewsLatest

*ರಸ್ತೆ ಮೇಲೆ ಹರಿದು ಬಿದ್ದ ಕೇಬಲ್ ವೈರ್: ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವು*

ಪ್ರಗತಿವಾಹಿನಿ ಸುದ್ದಿ: ರಸ್ತೆಯಲ್ಲಿ ಕೇಬಲ್ ವೈರ್ ಹರಿದು ಬಿದ್ದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿರುವ ಅರ್ಬನ್ ಓಯಸಿಸ್ ಮಾಲ್ ಬಳಿ ಈ ಅಪಘಾತ ಸಂಭವಿಸುದೆ, ರಸ್ತೆ ಮೇಲೆ ಕೆಬಲ್ ವೈರ್ ಹರಿದು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.

ಮೃತರನ್ನು ತಾಜ್ ನಗರ ನಿವಾಸಿಗಳಾದ ಫಯಾಜ್ (25) ಮತ್ತು ಮೋಹಿದ್ (27) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಸಾಗುತ್ತಿದ್ದ ಇಬ್ಬರು ಯುವಕರು ಆ ವೈರ್‌ಗೆ ಸಿಲುಕಿ ನಿಯಂತ್ರಣ ಕಳೆದುಕೊಂಡು ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹುಬ್ಬಳ್ಳಿ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt


Related Articles

Back to top button