Belagavi NewsBelgaum NewsKannada NewsKarnataka News

*3 ದಿನಗಳ ಕೈಗಾರಿಕೆ- ವಾಣಿಜ್ಯ ಪ್ರದರ್ಶನ ಬೆಲೆಕ್ಸ್ -2026 ಯಶಸ್ವಿ ಮುಕ್ತಾಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಬೆಳಗಾವಿ ವಾಣಿಜ್ಯೋದ್ಯಮ ಸಂಘ ಆಯೋಜಿಸಿದ್ದ 3 ದಿನಗಳ ಕೈಗಾರಿಕೆ ಮತ್ತು ವಾಣಿಜ್ಯ ಪ್ರದರ್ಶನ ಬೆಲೆಕ್ಸ್ -2026 ಗುರುವಾರ ಯಶಸ್ವಿಯಾಗಿ ಮುಕ್ತಾಯವಾಯಿತು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ಇಂತಹ ಅಪರೂಪದ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಪ್ರಶಂಸಿಸಿದರು. ಬೆಳಗಾವಿಯ ಅಭಿವೃದ್ಧಿಗೆ ವಾಣಿಜ್ಯೋದ್ಯಮಿಗಳ ಕೊಡುಗೆ ಅಪಾರ. ಇಲ್ಲಿಯ ಜನರಿಗೆ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ನೀಡುವ ಕೆಲಸವನ್ನು ಉದ್ಯಮಿಗಳು ಮಾಡುತ್ತಿದ್ದಾರೆ. ಅದರೊಂದಿಗೆ ಇಂತಹ ಪ್ರದರ್ಶನ ಆಯೋಜನೆ ಬೆಳಗಾವಿಯ ಅಭಿವೃದ್ಧಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತದೆ ಎಂದು ಅವರು ಹೇಳಿದರು. 

ಎಲ್ಲ ಮಳಿಗೆಗಳಿಗೆ ಭೇಟಿ ನೀಡಿದ ರಾಹುಲ್ ಶಿಂಧೆ, ಬೆಳಗಾವಿಯಲ್ಲಿ ಇಷ್ಟೊಂದು ವೈವಿದ್ಯಮಯ ಉದ್ಯಮಗಳಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. 

Home add -Advt

ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಪ್ರಭಾಕರ ನಾಗರಮುನೋಳಿ ಸ್ವಾಗತಿಸಿದರು. ಕಾರ್ಯದರ್ಶಿ ಸತೀಶ್ ಕುಲಕರ್ಣಿ ನಿರ್ವಹಿಸಿದರು. ಇವೆಂಟ್ ಚೇರಮನ್ ಉದಯ ಜೋಶಿ 3 ದಿನಗಳ ಪ್ರದರ್ಶನದ ಕುರಿತು ಮಾಹಿತಿ ನೀಡಿದರು. ಕೋ ಚೇರಮನ್ ವಿಕ್ರಮ್ ಜೈನ್ ಪ್ರಾಸ್ತಾವಿಕ ಮಾತನಾಡಿದರು. ಇದೇ ವೇಳೆ, 3 ಉತ್ತಮ ಮಳಿಗೆಗಳಿಗೆ ಪ್ರಶಸ್ತಿ ನೀಡಲಾಯಿತು. ಸ್ವಪ್ನಿಲ್ ಶಹಾ ವಂದಿಸಿದರು. 

Related Articles

Back to top button