Kannada NewsKarnataka NewsLatest

*ರಾಜ್ಯದಲ್ಲಿ ಮುಂದಿನ 4-5 ದಿನ ಭಾರಿ ಮಳೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮುಂದಿನ 4-5 ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಈ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು-ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ. 

ಇನ್ನು ಬೀದರ್, ಯಾದಗಿರಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. 

ದಕ್ಷಿಣ ಒಳನಾಡಿನ ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರಿನಲ್ಲೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

Home add -Advt

Related Articles

Back to top button