Kannada NewsKarnataka NewsLatest

*BREAKING: ಸಿದ್ಧಾರ್ಥ್ ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಶಾಲಾ-ಕಾಲೇಜಿಗೆ ಮತ್ತೆ ಬಾಂಬ್ ಬೆದರಿಕೆ ಹಾಕಲಾಗಿದೆ. ಟಿ.ಬೇಗೂರು ಬಳಿಯ ಸಿದ್ಧಾರ್ಥ್ ಮೆಡಿಕಲ್ ಕಾಲೇಜಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ.ಬೇಗೂರಿನಲ್ಲಿರುವ ಸಿದ್ಧಾರ್ಥ್ ಮೆಡಿಕಲ್ ಕಾಲೇಜಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮೆಡಿಕಲ್ ಕಾಲೇಜಿನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಅಪರಿಚಿತ ಇ-ಮೇಲ್ ಐಡಿಯಿಂದ ಸಂದೇಶ ರವಾನಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬಾಂಬ್ ಪತ್ತೆದಳ, ಶ್ವಾನದಳ, ಬಾಂಬ್ ನಿಷ್ಕ್ರಿಯದಳ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.

Home add -Advt

Related Articles

Back to top button