
ಪ್ರಗತಿವಾಹಿನಿ ಸುದ್ದಿ: ಇರಾನ್ ಮೇಲೆ ಇಸ್ರೇಲ್-ಅಮೆರಿಕಾ ಜಂಟಿ ದಾಳಿ ಮುಂದುವರೆದಿದ್ದು, ವಿವಿಧೆಡೆ ಇಂದು ನಡೆದ ದಾಳಿಯಲ್ಲಿ 19 ಜನರು ಸಾವನ್ನಪ್ಪಿದ್ದಾರೆ.
ಇರಾನ್ ನ ವಸತಿ ಪ್ರದೇಶವನ್ನು ಗುರಿಯಾಗಿಸಿಕೊಂಡು ಇಸ್ರೇಲ್-ಅಮೆರಿಕಾ ದಾಳಿ ನಡೆಸಿದ್ದು, 6 ಜನರು ಮೃತಪಟ್ಟಿದ್ದಾರೆ. ಹಲವರು ಅವಶೇಷಗಳಡಿ ಸಿಲುಕಿದ್ದಾರೆ.
ಮೂರು ವಸತ್ ನಿಲಯಗಳನ್ನು ಗುರುಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಮತ್ತೊಂದೆಡೆ ಲೆಬನಾನ್ ಮೇಲೆ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ಇಸ್ರೇಲ್ ನಡೆಸಿದ ದಾಳಿಯಲ್ಲಿ 13 ಜನರು ಸಾವನ್ನಪ್ಪಿದ್ದಾರೆ.
ಇಸ್ರೇಲ್ ದಾಳಿಗೆ ಪ್ರತಿಯಾಗಿ ಇರಾನ್ ಪ್ರತಿ ದಾಳಿ ನಡೆಸಿದ್ದು, ಟೆಲ್ ಅವಿವ್ ಮೇಲೆ ಇರಾನ್ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಲಾಗಿದೆ. ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 10 ದಿನಗಳ ಕಾಲ ಕದನ ವಿರಾಮ ಮುಂದುವರೆಸಿದ್ದು, ಹತ್ತು ದಿನಗಳ ಕಾಲ ಇಂಧನ ಸ್ಥಾವರಗಳ ಮೇಲೆ ದಾಳಿ ನಡೆಸಲ್ಲ. ಇರಾನ್ ಮನವಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.



