Belagavi NewsBelgaum NewsKannada NewsKarnataka NewsLatest
*ಅಕ್ರಮ ಸರಾಯಿ ಮಾರಾಟಕ್ಕೆ ಕಡಿವಾಣ ಹಾಕಿ; ಮಹಿಳೆಯರ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವಂತೆ ಬೆಳಗಾವಿ ತಾಲೂಕಿನ ಚಚಡಿ ಗ್ರಾಮದ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ.
ಶುಕ್ರವಾರ ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿಗರ ಆಗಮಿಸಿದ ಚಚಡಿ ಗ್ರಾಮದ ಮಹಿಳೆಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿದರು.
ಗ್ರಾಮದಲ್ಲಿರೋ ಬಹುತೇಕ ಅಂಗಡಿಕಾರರು ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದಾರೆ. ಇದರ ಪರಿಣಾಮ ಗ್ರಾಮದಲ್ಲಿರೋ ಕುಟುಂಬಗಳು ಬೀದಿಗೆ ಬುರುತ್ತಿವೆ. ಕುಟುಂಬಗಳ ಶಾಂತಿ, ನೆಮ್ಮದಿ ಹಾಳಾಗುತ್ತಿದೆ. ಗ್ರಾಮದಲ್ಲಿ ಆರೋಗ್ಯಕರ ವಾತಾವರಣ ಸಂಪೂರ್ಣ ಹದಗೆಟ್ಟಿದ್ದು, ಕುಡಿದುಬಂದು ನಮ್ಮ ಮಕ್ಕಳೇ ನಮ್ಮನ್ನು ಹೊಡೆಯುತ್ತಿದ್ದಾರೆ.
ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅಕ್ರಮ ಸಾರಾಯಿ ಮಾರಾಟ ಮಾಡೋರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಗ್ರಾಮದಲ್ಲಿ ಇರುವ ಮದ್ಯ ಅಂಗಡಿ ಬಂದ ಮಾಡಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಬೆಳಗಾವಿ ಡಿಸಿ, ಅಬಕಾರಿ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.



