
ಪ್ರಗತಿವಾಹಿನಿ ಸುದ್ದಿ: ತಿರುಪತಿಗೆ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ನಾಲ್ಕು ವರ್ಷದ ಮಗು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನಿಂದ ತಿರುಪತಿ ವೆಂಕಟೇಶ್ವರಸ್ವಾಮಿ ದರ್ಶನಕ್ಕೆ ಕುಟುಂಬ ಕಾರಿನಲ್ಲಿ ತೆರಳುತ್ತಿತ್ತು. ಈ ವೇಳೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಎಂಬಲ್ಲಿ ನಿಂತಿದ್ದ ಬಸ್ ಗೆ ಕಾರು ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ.
ಘಟನೆಯಲ್ಲಿ ಬೆಂಗಳೂರು ಮೂಲದ ದಂಪತಿ ಹಾಗೂ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




