Belagavi NewsBelgaum NewsKannada NewsKarnataka News

*ಒಳಮೀಸಲಾತಿ ವರದಿ ಅವೈಜ್ಞಾನಿಕ: ಬಲಗೈ ಸಮುದಾಯಗಳಿಗೆ ಅನ್ಯಾಯ: ಶ್ರೀ ಬಸವ ನಾಗಿದೇವ ಸ್ವಾಮೀಜಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾ. ನಾಗಮೋಹದಾಸ್ ಆಯೋಗ ನೀಡಿರುವ ವರದಿ ಅವೈಜ್ಞಾನಿಕವಾಗಿದ್ದು, ದಲಿತ ಸಮುದಾಯದ ಬಲಗೈ ಬಣಗಳಿಗೆ ಗಂಭೀರ ಅನ್ಯಾಯವಾಗಿದೆ ಎಂದು ಚಿತ್ರದುರ್ಗದ ಛಲವಾದಿ ಗುರುಪೀಠದ ಶ್ರೀ ಬಸವ ನಾಗಿದೇವ ಸ್ವಾಮೀಜಿ ಕಿಡಿಕಾರಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಣ್ಣ ಸಮಸ್ಯೆಯನ್ನು ದೊಡ್ಡದಾಗಿಸಿ ಬಲಗೈ ಸೇರಿ ಹಲವು ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

ನಾಗಮೋಹದಾಸ್ ಆಯೋಗದ ವರದಿಯಲ್ಲಿ ಉದ್ದೇಶಪೂರ್ವಕವಾಗಿ ಬಲಗೈ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದ್ದು, ಈ ವರದಿಯನ್ನು ತಕ್ಷಣ ಮರುಪರಿಶೀಲನೆಗೆ ಒಳಪಡಿಸಬೇಕು. ಸರ್ಕಾರವೇ ದೌರ್ಜನ್ಯ ನಡೆಸುತ್ತಿರುವಂತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರವು ಯಾವುದೇ ಕಾರಣಕ್ಕೂ ಅವೈಜ್ಞಾನಿಕವಾಗಿರುವ ಒಳಮೀಸಲಾತಿ ಹಂಚಿಕೆಯನ್ನು ಮಾನ್ಯ ಮಾಡಬಾರದು. ತಪ್ಪಿದ್ದಲ್ಲಿ ಕಾನೂನು ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಸಿದರು.

Home add -Advt

ಮಾ.27ರಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತು ನಿರ್ಣಯ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದರು. ಆದರೆ, ಇದುವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ವಿಧಾನಸಭೆ ಉಪಚುನಾವಣೆ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

Related Articles

Back to top button