Kannada NewsKarnataka NewsLatest

*ಈಜಲು ಹೋಗಿದ್ದ ನಾಲ್ಕು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವು*

ಪ್ರಗತಿವಾಹಿನಿ ಸುದ್ದಿ: ಕೃಷಿ ಹೊಂಡಕ್ಕೆ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಕೃಷಿ ಹೊಂಡದ ನೀರಲ್ಲಿ ಮುಳುಗಿ ಕಿರಣ್​​​(6), ಬಸಮ್ಮ(11), ಶರತ್(6), ಹನುಮೇಶ್(7) ಮೃತಪಟ್ಟಿದ್ದಾರೆ.

ಶಾಲೆಗೆ ರಜೆ ಇದ್ದಿದ್ದರಿಂದ ನಾಲ್ವರು ಮಕ್ಕಳು ಈಜಲು ಹೋಗಿದ್ದರು. ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ಜಲಸಮಾಧಿಯಾಗಿದ್ದಾರೆ.

ಮಕ್ಕಳನ್ನು ಕಳೆದುಕೊಂಡು ಇಡೀ ಗ್ರಾಮದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Home add -Advt


Related Articles

Back to top button