Belagavi NewsBelgaum NewsKannada NewsKarnataka News

*ಎಪ್ರಿಲ್ 3 ರ ವರೆಗೆ ರಾಜ್ಯದ 15 ಜಿಲ್ಲೆಯಲ್ಲಿ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಭೀಕರ ಬಿಸಿಲು ಜನರನ್ನು ಹೈರಾಣಾಗಿಸಿದ್ದು ಸೆಖೆಗೆ ಜನರು ಕಂಗಾಲಾಗಿದ್ದಾರೆ. ಆದರೆ ಇದರ ಮದ್ಯೆ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಏಪ್ರಿಲ್ 3 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ ಹಾಗೂ ಬೆಂಗಳೂರು ಸೇರಿದಂತೆ ಒಟ್ಟು 14 ರಿಂದ 15 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜಧಾನಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು. 

Home add -Advt

Related Articles

Back to top button