Belagavi NewsBelgaum NewsKannada NewsKarnataka News

*ಈಜಲು ಹೋಗಿ ಇಬ್ಬರು ಮಕ್ಕಳು ನೀರುಪಾಲು: ಸಂತಾಪ ಸೂಚಿಸಿದ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಘಟಪ್ರಭಾ ನದಿಯ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಮೃತಪಟ್ಟ ಘಟನೆ ಸೋಮವಾರ ಯಮಕನಮರಡಿ ಸಮೀಪದ ಹಳೆ ಗುಡಗನಟ್ಟಿ ಗ್ರಾಮದಲ್ಲಿ ನಡೆದಿದದ್ದ, ಘಟನೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ಕಳವಳ ವ್ಯಕ್ತಪಡಿಸಿದ್ದಾರೆ.

ಕೃಷ್ಣ ವಿಠ್ಠಲ್ ಖಾನಾಪುರಿ (14) ಮತ್ತು ಪ್ರಜ್ವಲ್ ಗೋಕಾರ್ (13) ಇಬ್ಬರು ಮೃತ ದುರ್ದೈವಿಗಳು. ಐವರು ಸ್ನೇಹಿತರ ಗುಂಪು ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಈಜಲು ಹೋದಾಗ ಈ ಅವಘಡ ಸಂಭವಿಸಿದೆ. ಈ ಇಬ್ಬರೂ ಬಾಲಕರು  ಹಳೆ ಗುಡಗನಟ್ಟಿ ಗ್ರಾಮದ ನಿವಾಸಿಗಳಾಗಿದ್ದು, ಆಟವಾಡುತ್ತಾ ನದಿಗೆ ಇಳಿದಾಗ ನೀರಿನ ಆಳ ತಿಳಿಯದೇ ಮುಳುಗಿ ಸಾವನ್ನಪ್ಪಿದ್ದಾರೆ.

ಯಮಕನಮರಡಿ ಕ್ಷೇತ್ರದ ಗುಡಗನಹಟ್ಟಿ ಆರ್.ಸಿ ಗ್ರಾಮದ ಮಕ್ಕಳು ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ದುರದೃಷ್ಟವಶಾತ್ ಅಕಾಲಿಕ ಮರಣ ಹೊಂದಿದ ಸುದ್ದಿ ಕೇಳಿ ಮನಸ್ಸಿಗೆ ತುಂಬ ಆಘಾತವಾಯಿತು. ಆ ಪುಟ್ಟ ಕಂದಮ್ಮಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ. ಮಕ್ಕಳನ್ನು ಕಳೆದುಕೊಂಡು ಶೋಕದಲ್ಲಿರುವ ಆ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಈ ಮೂಲಕ ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ. ಅವರ ಈ ನೋವಿನಲ್ಲಿ ನಾನೂ ಕೂಡಾ ಭಾಗಿಯಾಗಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸತೀಶ ಜಾರಕಿಹೊಳಿ ಅವರು ಸಂತಾಪ ವ್ಯಕ್ತಪಡಿಸಿದರು.

ಪೊಷಕರಲ್ಲಿ ಮನವಿ ಮಾಡಿದ ಸಚಿವ ಸತೀಶ್

Home add -Advt

ಶಾಲಾ ರಜೆಗಳು ಮಕ್ಕಳಿಗೆ ಮೋಜಿನ ಸಮಯವಾಗಿದ್ದರೂ, ಈ ಸಮಯದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾ ಇರಲಿ. ಅವರು ಎಲ್ಲಿಗೆ ಹೋಗುತ್ತಿದ್ದಾರೆ ಮತ್ತು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಸದಾ ಗಮನವಿರಲಿ ಎಂದು ಮನವಿ ಮಾಡಿದ್ದಾರೆ.

Related Articles

Back to top button