Kannada NewsKarnataka NewsLatest

*ಮನೆಯಲ್ಲಿ ಸಂಗ್ರಹಿಸಿಟ್ಟ ಪೆಟ್ರೋಲ್ ಬ್ಲಾಸ್ಟ್: ಮಹಿಳೆ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ; ಮನೆಯಲ್ಲಿ ಸಂಗ್ರಹ ಮಾಡಿದ್ದ ಪೆಟ್ರೋಲ್‌ ಕ್ಯಾನ್‌ಗೆ ಬೆಂಕಿ ತಗುಲಿದ ಪರಿಣಾಮ ಮಹಿಳೆ ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.

ಧಾರವಾಡ ತಾಲೂಕಿನ‌ ತಡಕೋಡ ಗ್ರಾಮದ ಹರಿಜನಕೇರಿ‌ ಓಣಿಯಲ್ಲಿ ಈ ಘಟನೆ ನಡೆದಿದ್ದು, ಪೂರ್ಣಿಮಾ ಕಲ್ಲಪ್ಪ ಹಾದಿಮನಿ (32) ಎಂಬ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾಳೆ. ಇಒ ಘಟನೆಯಲ್ಲಿ ಶೇ.80 ರಷ್ಟು ದೇಹ ಸುಟ್ಟಿರುವ ಕಾರಣ ಆಕೆಯ ಸ್ಥಿತಿ ಚಿಂತಾಜನಕವಾಗಿದೆ.

ಪೂರ್ಣಿಮಾ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ‌ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ವಾನಿಸಲಾಗಿದೆ. 

ಪೆಟ್ರೋಲ್ ಅಭಾವ ಆಗಿದೆ ಎಂಬ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ ಪೆಟ್ರೋಲ್‌ನ್ನು ಕ್ಯಾನ್‌ನಲ್ಲಿ ಸಂಗ್ರಹಿಸಿ, ಮನೆಯ ಫ್ರಿಡ್ಜ್‌ ಬಳಿ ಇಡಲಾಗಿತ್ತು. ಪೂರ್ಣಿಮಾ ಅಡುಗೆ ಮನೆಯಲ್ಲಿದ್ದಾಗ ಏಕಾಏಕಿ ಕ್ಯಾನ್‌ಗೆ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡಿದ್ದು, ಇಡೀ ಮನೆಗೆ ಬೆಂಕಿ‌ ಆವರಿಸಿದೆ.‌

Home add -Advt

ಅಡುಗೆ ಮನೆಯಲ್ಲಿ ಸಿಲುಕಿದ್ದ ಅತ್ತಿಗೆಯನ್ನು ಮೈದುನ ಯಲ್ಲಪ್ಪ ಕಾಪಾಡಿದ್ದು, ಈ ವೇಳೆ ಅವನಿಗೂ ಗಾಯಗಳಾಗಿವೆ. ಆದರೆ ಮಹಿಳೆಯ ಸ್ಥಿತಿ ಮಾತ್ರ ಗಂಭೀರವಾಗಿದೆ. ಈ ವೇಳೆ ಮನೆಯ ಸದಸ್ಯರ ಹೊರಗಡೆ ಕುಳಿತಿದ್ದರಿಂದ ಪಾರಾಗಿದ್ದಾರೆ. 

ಅಗ್ನಿ ಶಾಮಕ‌ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಮದುವೆ ಕಾರ್ಯಕ್ರಮಗಳಿಗೆ ರಥ ಒಡಿಸೊದಕ್ಕೆ ಇವರು ಪೆಟ್ರೋಲ್ ಸ್ಟಾಕ್ ಮಾಡಿದ್ದರು ಎಂದು ತಿಳಿದು ಬಂದಿದೆ. ಸದ್ಯ ಗರಗ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Articles

Back to top button