ದಾವೋಸ್ ನಿಂದ ಬಂದ ಬಳಿಕ ಸಂಪುಟ ವಿಸ್ತರಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾರೂ ಆತಂಕಕ್ಕೀಡಾಗುವ ಅಗತ್ಯವಿಲ್ಲ. ದಾವೋಸ್ ನಿಂದ ವಾಪಸ್ಸಾದ ಬಳಿಕ ಸಂಪುಟ ವಿಸ್ತಾರಣೆ ಮಾಡಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಸ್ವಿಟ್ಜರ್ಲೆಂಡ್‍ನ ದಾವೋಸ್ ನಾಲ್ಲಿ ನಡೆಯಲಿರುವ ವಾಣಿಜ್ಯ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಕೆಂಪೇಗೌಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಅಮಿತ್ ಷಾ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ಅವರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ದಾವೋಸ್​ನಿಂದ ಮರಳಿದ ಮೇಲೆ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದರು.

ಸಂಪುಟ ವಿಸ್ತರಣೆಗೆ ಯಾವುದೇ ಅಡ್ಡಿ-ಆತಂಕ ಇಲ್ಲ. ಈ ವಾರದಲ್ಲಿ ಸಂಪುಟ ವಿಸ್ತರಣೆ ಮಾಡುತ್ತೇವೆ. ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಸುಳ್ಳು. ನಾನು 2 ಬಾರಿ ಅಮಿತ್ ಷಾ ಜೊತೆ ಮಾತಾಡಿದ್ದೇನೆ. ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಸಮಸ್ಯೆ ಇಲ್ಲ ಎಂದುರು.

ಇನ್ನು ಶೃಂಗಸಭೆಯಲ್ಲಿ 38 ಹೂಡಿಕೆದಾರರು, ಉದ್ಯಮಿಗಳ ಜೊತೆ ಸಂವಾದ ನಡೆಸುತ್ತೇವೆ. ರಾಜ್ಯಕ್ಕೆ ಹೂಡಿಕೆ ತರಲು ವಿಶೇಷ ಪ್ರಯತ್ನ ಮಾಡುತ್ತೇವೆ. ವರ್ಲ್ಡ್​ ಎಕಾನಮಿ ಫೋರಂನಿಂದ ರಾಜ್ಯಕ್ಕೆ ಬಂಡವಾಳ ಹರಿದು ಬರುವ ಸಾಧ್ಯತೆ ಇದೆ. ಕೈಗಾರಿಕೋದ್ಯಮಿಗಳು ಹಾಗೂ ಹೂಡಿಕೆದಾರರಿಗೆ ನಾವು ಸೌಲಭ್ಯ, ಸಹಕಾರ ಕೊಡುತ್ತೇವೆ. ಈ ಪ್ರಯತ್ನಗಳಿಂದ ಉದ್ಯೋಗಾವಕಾಶ ಹೆಚ್ಚಾಗುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ವಿಶ್ವ ಆರ್ಥಿಕ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ವಿಟ್ಜರ್​ಲೆಂಡ್​ನ ದಾವೋಸ್​ಗೆ ತೆರಳಲಿದ್ದಾರೆ. ಇಂದಿನಿಂದ 6 ದಿನಗಳ ಕಾಲ ಸಿಎಂ ಬಿಎಸ್​ವೈ ದಾವೋಸ್​ನಲ್ಲಿ ಇರಲಿದ್ದಾರೆ. ಇಂದು ಬೆಳಗ್ಗೆ 10.25ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಿ, ಅಲ್ಲಿಂದ ಜ್ಯೂರಿಚ್ ತೆರಳಲಿದ್ದಾರೆ. ಬಳಿಕ ಜ್ಯೂರಿಚ್ ನಿಂದ ದಾವೋಸ್ ಗೆ ಕಾರಿನಲ್ಲಿ ಪ್ರಯಾಣ ಬೆಳೆಸಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button