*ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿದ 16 ಜನರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಳೆ ದ್ವೇಶದ ಹಿನ್ನೆಲೆಯಲ್ಲಿ ಕಳೆದ ರಾತ್ರಿ 16 ಜನರು ಕುಡಿಕೊಂಡು ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿಮ ಹಣ್ಣಿಕೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ..ಸಂಗನಗೌಡ ಬಸನಗೌಡ ಪಾಟೀಲ್ (50) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಕೊಲೆ ಮಾಡಿದ ಆರೋಪಿಗಳ ನಡುವೆ ಕಳೆದ ಕೆಲ ವರ್ಷಗಳಿಂದ ಕಲಹ ನಡೆಯುತ್ತಿತ್ತು. ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ವ್ಯಕ್ತಿಯೋರ್ವ ಮದ್ಯಪಾನ ಮಾಡಿ ಡ್ಯಾನ್ಸ್ ಮಾಡುವ ವೇಳೆ ಸುಮಾರು 16 ಜನರಿಂದ ಭೀಕರವಾಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ.
ಬೈಲಹೊಂಗಲ ತಾಲೂಕಿನ ಸಿದ್ದೇಶ್ವರ ಜಾತ್ರೆಯ ನಡೆಯುವ ವೇಳೆ ಮದ್ಯಪಾನ ಮಾಡಿ ಡ್ಯಾನ್ಸ್ ಮಾಡುತ್ತ ಬರುತ್ತಿದ್ದ ಸಂಗನಗೌಡನ ಮೇಲೆ 16 ಜನರ ತಂಡ ದಾಳಿ ಮಾಡಿ ರಾಡ್ ನಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾರೆ. ಸದ್ಯ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



