
ಪ್ರಗತಿವಾಹಿನಿ ಸುದ್ದಿ: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೈಕ್ ಸವಾರ ಸಜೀವದಹನವಾಗಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲುಕಿನ ಕನ್ನೊಳ್ಳಿ ಗ್ರಾಮದಲ್ಲಿ ಈ ಘಟನೆನಡೆದಿದೆ. ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ಬೈಕ್ ಸವಾರ ಸಜೀವದಹನವಾಗಿದ್ದಾರೆ.
ಬಸ್ ನಲ್ಲಿದ್ದ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಷ್ಟರಲ್ಲಿ ಬಸ್ ಸುಟ್ಟು ಕರಕಲಾಗಿದೆ. ಮೃತ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. .ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.



