ಪಲ್ಸ್ ಪೋಲಿಯೋ ಅಭಿಯಾನಕ್ಕೆ ಅಮಿತ್ ಶಾ ಚಾಲನೆ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಳೆದ ರಾತ್ರಿ ಜನಿಸಿದ ಮೂವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದರು.

ಹುಬ್ಬಳ್ಳಿಯಲ್ಲಿ ಬೆಳಿಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಗೆ ಅಮಿತ್ ಶಾ ಉಪಹಾರಕ್ಕೆ ಆಗಮಿಸಿದ್ದರು. ಈ ವೇಳೆ ಅಮಿತ್ ಶಾ ಅವರು ಜೋಶಿ ಮನೆಯಲ್ಲಿ ಮೂವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದರು.

ಹುಬ್ಬಳ್ಳಿ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಶರೀಫಾ ಕಳ್ಳಿಭಾವಿ, ಶಂಕುತಲಾ ಸೊಂಳಕೆ, ಮರಿಯಮ್ಮ ಬಳ್ಳಾರಿ ಎಂಬುವವರು ಮಕ್ಕಳಿಗೆ ಜನ್ಮ ನೀಡಿದ್ದು, ಈ ಮೂರು ನವಜಾತ ಶಿಶುಗಳಿಗೆ ಅಮಿತ್ ಶಾ ಪೋಲಿಯೋ ಲಸಿಕೆ ಹಾಕಿದ್ದು ವಿಶೇಷವಾಗಿತ್ತು.

ಈ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂ ಗೋವಿಂದ ಕಾರಜೋಳ, ಪ್ರಹ್ಲಾದ್ ಜೋಷಿ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

Related Articles

Back to top button