Belagavi NewsBelgaum NewsKannada NewsKarnataka News

*ಬೆಳಗಾವಿ ಸೇರಿ 22 ಜಿಲ್ಲೆಯಲ್ಲಿ ಇಂದು ಭಾರಿ ಮಳೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ :  ಇಂದು ಕೂಡ ಹವಾಮಾನ ಇಲಾಖೆ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದು ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ಏಪ್ರಿಲ್ 8 ರವರೆಗೂ ಮಳೆ ಬೀಳುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಬೇಸಿಗೆಯ ಬಿಸಿಲು ಸಹ ಇರಲಿದೆ.

ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ, ಉತ್ತರ ಕನ್ನಡ, ಧಾರವಾಡ, ಶಿವಮೊಗ್ಗ ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಮಂಡ್ಯ ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ವಿಜಯಪುರ, ಕಲ್ಬುರ್ಗಿ, ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

Home add -Advt

ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ.

Related Articles

Back to top button