CrimeKannada NewsKarnataka NewsLatest

*ಜಿಮ್ ಟ್ರೇನರ್ ಕೇಸ್ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ*

ಪ್ರಗತಿವಾಹಿನಿ ಸುದ್ದಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಾಲು ಸಾಲು ಲವ್ ಜಿಹಾದ್ ಪ್ರಕರಣಗಳು ನಡೆಯುತ್ತಿವೆ. ಜಿಮ್ ಟ್ರೇನರ್ ಸಮೀರ್ ಮುಲ್ಲಾ ಕೇಸ್ ಬೆನ್ನಲ್ಲೇ ಇದೀಗ ಮತ್ತೋರ್ವ ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರವೆಸಗಿ, ಮದುವೆಗೆ ಸಿದ್ಧತೆ ನಡೆಸಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮುಫೀಸ್ ಮಿಯಾನ್ನವರ್ ಎಂಬಾತ ಹಿಂದೂ ಯುವತಿಯನ್ನು ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರವೆಸಗಿದ್ದಾನೆ. ಪ್ರೀತಿಸುವ ನಾಟಕವಾಡಿ ಲೈಂಗಿಕ ದೌರ್ಜನ್ಯವೆಸಗಿದ್ದ. ಬಳಿಕ ಯುವತಿಯನ್ನು ಧಾರವಾಡದಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಲು ಸಿದ್ಧತೆ ನಡೆಸಿದ್ದ.

ಕಳೆದ ಆಗಸ್ಟ್ ನಲ್ಲಿ ಮದುವೆಯಾಗಲು ನೋಂದಣಿಗೆ ಸಿದ್ಧತೆ ನಡೆಸಿದ್ದಾಗ ವಿಷಯ ತಿಳಿದ ಯುವತಿಯ ಪೋಷಕರು ಮದುವೆಯನ್ನು ನಿಲ್ಲಿಸಿದ್ದರು. ಇದಾದ ಬಳಿಕವೂ ಮುಫೀಸ್ ಮಿಯಾನ್ನವರ್ ಮತ್ತೆ ಬ್ಲ್ಯಾಕ್ ಮೇಲ್ ಮಾಡತೊಡಗಿದ್ದ. ನಿನ್ನ ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಮನೆಗೆ ನುಗ್ಗಿ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ಯಾರಿಗಾದರೂ ವಿಷಯ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಸಂತ್ರಸ್ತ ಯುವತಿ ಹಿಂದೂ ಸಂಘಟನೆಗಳ ನೆರವಿನಿಂದ ಪೊಲಿಸರಿಗೆ ದೂರು ನೀಡಿದ್ದಾಳೆ. ಕೇಶ್ವಾಪುರ ಠಾಣೆಯಲ್ಲಿ ಮುಫೀಸ್ ಮಿಯಾನ್ನವರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

Home add -Advt

Related Articles

Back to top button