Kannada NewsKarnataka NewsLatest
*BREAKING: ಗೂಡ್ಸ್ ವಾಹನ ಡಿಕ್ಕಿ: ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಗಳು ಸಾವು*

ಪ್ರಗತಿವಾಹಿನಿ ಸುದ್ದಿ: ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಗಳು ಸ್ಥಳದಲೇ ಸಾವನ್ನಪ್ಪಿದ್ದಾರೆ.
ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಕಮಲಾಪುರದ ಕೃಷ್ಣ (26) ಹಾಗೂ ವೆಂಕಟಾಪುರದ ಹನುಮಂತಪ್ಪ (50) ಮೃತ ದುರ್ದೈವಿಗಳು.
ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯ ವಾಚರ್ ಗಳಾಗಿ ಕೆಲಸ ಮಾಡುತ್ತಿದ್ದ ಇಬ್ಬರೂ ಕೆಲಸ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.


