
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗುವ ಸಾಧ್ಯತೆ ಇದೆ.
ಏಪ್ರಿಲ್ 7ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲವಾದರೂ ನಾಳೆ ಫಲಿತಾಂಶ ಎನ್ನಲಾಗಿದೆ.
ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಏಪ್ರಿಲ್ 7, 2026 ರಂದು ಅಂದರೆ ನಾಳೆ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಎಂದು ಹೇಳಲಗುತ್ತಿದೆ.
ಫಲಿತಾಂಶವನ್ನು ಈ ಲಿಂಕ್ ಮೂಲಕ ನೋಡಬಹುದು. karresults.nic.in ಮತ್ತು kseab.karnataka.gov.in ಅನ್ನು ಶಿಕ್ಷಣ ಇಲಾಖೆ ನೀಡಿದೆ. ಒಂದು ವೇಳೆ ಈ ಲಿಂಕ್ಗಳಲ್ಲಿ ದೋಷ ಬಂದರೆ, ಇನ್ನು ಆಯ್ಕೆಯನ್ನು ಕೂಡ ನೀಡಲಾಗಿದೆ. PUC ಫಲಿತಾಂಶಗಳನ್ನು ಡಿಜಿಲಾಕರ್ ವೆಬ್‌ಸೈಟ್ – digilocker.gov.in ನಲ್ಲಿಯೂ ಪರಿಶೀಲಿಸಲು ಅವಕಾಶವನ್ನು ನೀಡಲಾಗಿದೆ.
ಕಳೆದ ವರ್ಷ ಏಪ್ರಿಲ್ 8 ರಂದು ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಘೋಷಿಸಲಾಯಿತು, ಪರೀಕ್ಷೆಗಳು ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದಿತ್ತು. ಈ ಬಾರಿಯೂ ಅದೇ ಸಮಯದಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.



