Belagavi NewsBelgaum NewsKannada NewsKarnataka NewsNationalPolitics

*ಬೆಳಗಾವಿ ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ರೇಡ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭ್ರಷ್ಟಾಚಾರ ಆರೋಪದಡಿ ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಇಇ ಅಜಯ್ ಸಿಂಗ್ ರಜಪೂತ ಅವರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. 

ನಗರದ ಆಂಜನೇಯ ನಗರದಲ್ಲಿರುವ ನಿವಾಸ, ಅಥಣಿ ಹಾಗೂ ಹುಕ್ಕೇರಿ ಪಟ್ಟಣಗಳಲ್ಲಿನ ಆಸ್ತಿಗಳ ಮೇಲೆ ನಡೆದ ದಾಳಿಯಲ್ಲಿ ಪರಿಶೀಲನೆ ವೇಳೆ ಒಂದು ಕೆಜಿಗೂ ಅಧಿಕ ಚಿನ್ನಾಭರಣ ಪತ್ತೆಯಾಗಿದ್ದು, ಬ್ಯಾಂಕ್ ಖಾತೆಗಳಲ್ಲಿ ಸುಮಾರು 2 ಕೋಟಿ ಠೇವಣಿ ಇರುವುದೂ ಬೆಳಕಿಗೆ ಬಂದಿದೆ.

ಇದೇ ವೇಳೆ, ಬೆಳಗಾವಿ ನಗರದಲ್ಲೇ ಅಕ್ಕಪಕ್ಕದಲ್ಲಿರುವ ಮೂರು ಮನೆಗಳನ್ನು ಹೊಂದಿರುವುದು ಅಧಿಕಾರಿಯ ಆಸ್ತಿ ಪ್ರಮಾಣದ ಬಗ್ಗೆ ಅನುಮಾನ ಹುಟ್ಟಿಸಿದೆ. 

ಅಕ್ರಮ ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. 

Home add -Advt

ಡಿವೈಎಸ್ಪಿ ಬಿಎಸ್ ಪಾಟೀಲ್ ಹಾಗೂ ಭರತ್ ರೆಡ್ಡಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

Related Articles

Back to top button