EducationKannada NewsKarnataka NewsLatest

*ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ದ್ವಿತೀಯ ಪಿಯುಸಿ ಫಲಿತಾಂಶದ ಗೊಂದಲಕ್ಕೆ ತೆರೆ ಬಿದ್ದಿದ್ದು, ನಾಳೆ ಅಂದರೆ ಏಪ್ರಿಲ್​​ 9 ರಂದು ಫಲಿತಾಂಶ ಪ್ರಕಟಣೆಯಾಗಲಿದೆ ಎಂದು ಪರೀಕ್ಷಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ನಾಳೆ ಬೆಳಿಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ನಂತರ ಮಧ್ಯಾಹ್ನ 3ಗಂಟೆಗೆ ಅಧಿಕೃತ ವೆಬ್‌ಸೈಟ್​​ನಲ್ಲಿ ರಿಸಲ್ಟ್ ಲಭ್ಯವಿರಲಿದೆ.

ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಲಭ್ಯವಾಗಲಿದೆ. ಒಂದು ವೇಳೆ ವೆಬ್​​ಸೈಟ್​​ನಲ್ಲಿ ರಿಸಲ್ಟ್ ನೋಡುವಾಗ ಸರ್ವರ್ ಸಮಸ್ಯೆ ಎದುರಾದರೆ ಡಿಜಿಲಾಕರ್ ಮೂಲಕವೇ ಮಾರ್ಕ್ಸ್ ಕಾರ್ಡ್ ಪಡೆದುಕೊಳ್ಳಬಹುದು.

Home add -Advt


Related Articles

Back to top button