
ಪ್ರಗತಿವಾಹಿನಿ ಸುದ್ದಿ: ಹಂಪಿ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಬಳ್ಳಾರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ರೈಲಿನಲ್ಲಿ ಈ ಘಟನೆ ನಡೆದಿದೆ.
ಹಗರಿ ಗ್ರಾಮದ ಬಳಿ ರೈಲು ಚಲಿಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ತಕ್ಷಣ ರೈಲು ನಿಲ್ಲಿಸಿ ಬೆಂಕಿ ನಂದಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೆಂಕಿ ನಂದಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.


