Belagavi NewsBelgaum NewsEducationKannada NewsKarnataka NewsNational
*ದ್ವಿತೀಯ ಪರೀಕ್ಷೆ ಫಲಿತಾಂಶ: 600ಕ್ಕೆ 599 ಅಂಕ ಪಡೆದ ಬೆಳಗಾವಿ ವಿದ್ಯಾರ್ಥಿನಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಂದು ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬೆಳಗಾವಿ ನಗರದ ಹೆಮ್ಮೆಯ ವಿದ್ಯಾರ್ಥಿನಿ ಧ್ವನಿ ಸಂತೋಷ ಕುಲಕರ್ಣಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 599* ಅಂಕಗಳನ್ನು ಪಡೆಯುವ ಮೂಲಕ ಅತ್ಯುನ್ನತ ಸಾಧನೆ ಮಾಡಿದ್ದಾರೆ.
ಬೆಳಗಾವಿಯ ಗೋಗಟೆ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯಾದ ಧ್ವನಿ ಅವರ ಈ ಅಭೂತಪೂರ್ವ ಯಶಸ್ಸು ಜಿಲ್ಲೆಗೆ ಕೀರ್ತಿ ತಂದಿದೆ. ಪರೀಕ್ಷೆಯಲ್ಲಿ ಕೇವಲ ಒಂದು ಅಂಕವನ್ನಷ್ಟೇ ಕಳೆದುಕೊಂಡು ರಾಜ್ಯಮಟ್ಟದಲ್ಲಿ ಗಮನ ಸೆಳೆದಿರುವ ಇವರ ಸಾಧನೆಗೆ ಕುಟುಂಬಸ್ಥರು ಹಾಗೂ ಕಾಲೇಜಿನ ಶಿಕ್ಷಕ ವೃಂದದವರು ಹರ್ಷ ವ್ಯಕ್ತಪಡಿಸಿದ್ದು, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ನಡುವೆ ನಗರ ಪ್ರದೇಶದ ಈ ಪ್ರತಿಭೆ ಈಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾಳೆ.



