CrimeKannada NewsKarnataka NewsLatest

*ರಸ್ತೆ ಅಗಲಿಕರಣ ಕಾಮಗಾರಿ ವೇಳೆ ದುರಂತ: ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್​ ಘಾಟ್​ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆದಿತ್ತು. ಈ ವೇಳೆ ಗುಡ್ಡ ಕುಸಿದು ದುರ್ಘಟನೆ ಸಂಭವಿಸಿದೆ. ಕಾಮಗಾರಿಯ ನಿರ್ವಹಣೆ ಮಾಡುತ್ತಿದ್ದ ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿ ಮೂವರು ಸಾವನ್ನಪ್ಪಿದ್ದಾರೆ. 

ಸುಮಂತ ಮತ್ತು ಪರಮೇಶ್​ ಸೇರಿ ನಾಲ್ವರಿಗೆ ಗಾಯಗಳಾಗಿದ್ದು, ನಗರ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ​

ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಮೃತರು. ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. 

ಕುಂದಾಪುರ-ಶಿವಮೊಗ್ಗ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಉಂಟಾಗಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

Home add -Advt

ಸದ್ಯ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಚರಣೆ ನಡೆದಿದ್ದು, ರಾತ್ರಿ ಹಿನ್ನೆಲೆ ಅಡ್ಡಿಯುಂಟಾಗಿದೆ. ಘಟನಾ ಸ್ಥಳಕ್ಕೆ ಹೊಸನಗರ ತಹಶೀಲ್ದಾರ್‌ ಭರತ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಕುಂದಾಪುರ-ಶಿವಮೊಗ್ಗ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.

ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ಶಿವಮೊಗ್ಗದ ತುಂಗಾನಗರ ಬಳಿಯ ಕಾಮತ್ ಲೇಔಟ್​ನಲ್ಲಿ ನಡೆದಿದೆ. ಶಿವಮೊಗ್ಗದ ಮೇಲಿನ ತುಂಗಾನಗರ ನಿವಾಸಿಯಾಗಿರುವ ಮಂಜುನಾಥ್ ಮೃತ ಯುವಕ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button