*KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಬ್ದುಲ್ ಜಬ್ಬಾರ್*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ಬೈಎಲೆಕ್ಷನ್ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಹೈಕಮಾಂಡ್ ದೊಡ್ಡ ಶಾಕ್ ನೀಡಿದೆ. ದಾವಣಗೆರೆ ಬೈಎಲೆಕ್ಷನ್ ಪ್ರಚಾರದಿಂದ ದೂರ ಉಳಿದಿರುವುದು, ಷಡ್ಯಂತ್ರದ ಆರೋಪ ಎದುರಿಸಿತ್ತಿದ್ದ KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ತಾರಕಕ್ಕೇರಿದ್ದು, ದಾವಣಗೆರೆ ಉಪಚುನಾವಣೆಯ ಮತದಾನ ಮುಗಿದಿದ್ದರೂ ಪಕ್ಷದಲ್ಲಿನ ಗೊಂದಲ ಇನ್ನೂ ಬಗೆಹರಿದಿಲ್ಲ. ಈ ಮುನಿಸು ಮತ್ತಷ್ಟು ತೀವ್ರಗೊಂಡಿರುವ ನಡುವೆಯೇ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್ಸಿ ಅಬ್ದುಲ್ ಜಬ್ಬಾರ್ ದಿಢೀರ್ ರಾಜೀನಾಮೆ ಸಲ್ಲಿಸಿರುವುದರಿಂದ ಈ ಬೆಳವಣಿಗೆ ರಾಜ್ಯ ಕಾಂಗ್ರೆಸ್ಗೆ ಮತ್ತೊಂದು ಆಘಾತ ನೀಡಿದೆ.
ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಿಂದ ಸಚಿವ ಜಮೀರ್ ಮತ್ತು ಅಬ್ದುಲ್ ಜಬ್ಬಾರ್ ದೂರ ಉಳಿದಿದ್ದರು. ಪ್ರಚಾರದಿಂದ ದೂರ ಉಳಿದ ನಾಯಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪಕ್ಷದ ಒಂದು ಬಣ ಪಟ್ಟು ಹಿಡಿದಿತ್ತು. ಈ ಒತ್ತಡದ ಪರಿಣಾಮವಾಗಿ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.


