Belagavi NewsBelgaum NewsCrimeKannada NewsKarnataka NewsLatest

ಅನೈತಿಕ ಸಂಬಂಧ: ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಪ್ರಿಯಕರ ಜೊತೆ ಸೇರಿ ಕೊಲೆಗೈದ ಪತ್ನಿ

ಪ್ರಗತಿವಾಹಿನಿ ಸುದ್ದಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಕಾರಣಕ್ಕೆ ಪ್ರಿಯಕರನ ​​ ಜೊತೆ ಸೇರಿ ಪ್ರೀತಿಸಿ ಮದುವೆಯಾಗಿದ್ದ ಗಂಡನನ್ನೇ ಪತ್ನಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಅನಗೋಳದ ಬಾಬಲೇ ಗಲ್ಲಿಯಲ್ಲಿ ಈ ಘಟನೆ ನಡೆದಿದೆ. ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಅವಿನಾಶ್ ಸೂಪ್ಪಣ್ಣವರ (40) ಮೃತ ವ್ಯಕ್ತಿ. ಘಟನೆ ಸಂಬಂಧ ಪತ್ನಿ ಲಕ್ಷ್ಮೀ ಸೂಪಣ್ಣವರ ಮತ್ತು ಕೈಲಾಶ್ ಅಚ್ಚಿತಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

Home add -Advt

ತಂಪು ಪಾನೀಯದಲ್ಲಿ ನಿದ್ದೆ ಮಾತ್ರೆ ಹಾಕಿ ನೀಡಿದ್ದ ಆರೋಪಿಗಳು, ಅವಿನಾಶ್ ಕುಸಿದು ಬೀಳ್ತಿದ್ದಂತೆ ಸಿಲಿಂಡರ್​​ನಿಂದ ತಲೆ ಮತ್ತು ಎದೆ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದರು ಎಂದು ತನಿಖೆಯಲ್ಲಿ ಬಯಲಾಗಿದೆ.

ಮಾರ್ಚ್ 6ರಂದು ಸಂಜೆ 4ಕ್ಕೆ ಮನೆಯಿಂದ ಅವಿನಾಶ್ ಕ್ಲಿನಿಕ್‌ಗೆ ಹೋಗಿದ್ದರು. ಈ ವೇಳೆ ಥೆರಪಿ ಮಾಡಿಸಿಕೊಳ್ಳಲೆಂದು ಆರೋಪಿ ಕೈಲಾಶ್ ಕೂಡ ಕ್ಲಿನಿಕ್​​ಗೆ ತೆರಳಿದ್ದ. ಹೋಗುವಾಗ ತಂಪು ಪಾನೀಯದಲ್ಲಿ ನಿದ್ರೆ ಮಾತ್ರೆ ಬೆರಸಿಕೊಂಡು ಹೋಗಿದ್ದ ಈತ, ಥೆರಪಿಗೂ ಮುನ್ನ ಅವಿನಾಶ್​​ಗೆ ಅದನ್ನು ಕುಡಿಸಿದ್ದ. ತಂಪು ಪಾನೀಯ ಕುಡಿಯುತ್ತಿದ್ದಂತೆ ಅವಿನಾಶ್ ಕುಸಿದು ಬಿದ್ದಿದ್ದು, ಅಲ್ಲೇ ಇದ್ದ ಸಿಲಿಂಡರ್​​ನಿಂದ ದಾಳಿ ಮಾಡಿ ಕೈಲಾಶ್​​ ಕೊಲೆ ಮಾಡಿದ್ದ. ಈ ವೇಳೆ ಗಂಡ ಸತ್ತಿರುವುದನ್ನ ಕನ್ಪರ್ಮ್ ಮಾಡಿಕೊಳ್ಳಲು ಪತ್ನಿ ಲಕ್ಷ್ಮೀ ವಿಡಿಯೋ ಕಾಲ್ ಮಾಡಿದ್ದಳು. ಗಂಡ ಸತ್ತಿಲ್ಲ, ಮೂಗು ಬಿಗಿಹಿಡಿದು ಸಾಯಿಸು ಎಂದು ಈ ವೇಳೆ ಕೈಲಾಶ್​​ಗೆ ಹೇಳಿದ್ದಳು. ಆ ಬಳಿಕ ಕ್ಲಿನಿಕ್​​ಗೆ ಹೋಗಿದ್ದ ಲಕ್ಷ್ಮೀ, ಗಂಡನ ಸಾವಿನ ಬಗ್ಗೆ ಏನೂ ಗೊತ್ತಿಲ್ಲದಂತೆ ಗೋಳಾಟ ನಡೆಸಿದ್ದಳು. ಅಲ್ಲದೆ, ಶುಗರ್ ಹೆಚ್ಚಾಗಿ ಕುಸಿದು ಬಿದ್ದು, ತಲೆಗೆ ಪೆಟ್ಟಾಗಿ ಸಾವನಪ್ಪಿರುವ ಬಗ್ಗೆ ಕತೆ ಕಟ್ಟಿದ್ದಳು.

ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮೃತನ ತಾಯಿ ಟಿಳಕವಾಡಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಬೆನ್ನತ್ತಿದ ಪೊಲೀಸರಿಗೆ ಪತ್ನಿ ಲಕ್ಷ್ಮೀ ಮೇಲೆಯೇ ಅನುಮಾನ ಬಂದಿತ್ತು. ಎರಡು ವರ್ಷಗಳಿಂದ ಕೈಲಾಶ್ ಜೊತೆಗೆ ಲಕ್ಷ್ಮೀ ಅನೈತಿಕ ಸಂಬಂಧ ಹೊಂದಿದ್ದು, ಮೊಬೈಲ್ ರಿಚಾರ್ಜ್ ಮಾಡಿಸಲು ಹೋದಾಗ ಪೋನ್ ನಂಬರ್ ಶೇರ್ ಆಗಿತ್ತು. ಬಳಿಕ ಅವಿನಾಶ ಜೊತೆಗೂ ಕೈಲಾಶ್ ಉತ್ತಮ ಸಂಬಂಧ ಹೊಂದಿದ್ದ. ಇದನ್ನೇ ಬಂಡವಾಳ ಮಾಡಿಕೊಂಡು ಲಕ್ಷ್ಮೀ ಭೇಟಿಗೆ ಬರುತ್ತಿದ್ದ. ಅವಿನಾಶ್ ಮನೆಯ ಕೂಗಳತೆ ದೂರದಲ್ಲಿ ಕೈಲಾಶ್ ಮೊಬೈಲ್ ಶಾಪ್ ಇದ್ದು, ಈ ವಿಚಾರ ಗೊತ್ತಾಗಿ ಪತ್ನಿ ಮತ್ತು ಕೈಲಾಶ್​​ಗೆ ಅವಿನಾಶ್​​ ವಾರ್ನ್​​ ಕೂಡ ಮಾಡಿದ್ದ. ಇದೇ ಸಿಟ್ಟಿಗೆ ಪತಿ ಅವಿನಾಶ್ ಕೊಲೆಗೆ ಲಕ್ಷ್ಮೀ ಸ್ಕೆಚ್ ಹಾಕಿದ್ದಳು.

Related Articles

Back to top button