Film & EntertainmentKannada NewsKarnataka News

*ಕಿರುತೆರೆಯ ಖ್ಯಾತ ನಟ ಹರಿ ರಸ್ತೆ ಅಪಘಾತದಲ್ಲಿ ಸಾವು*

ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತವೊಂದರಲ್ಲಿ ಚಿತ್ರರಂಗದ ಖ್ಯಾತ ನಟ ಹರೀಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಿನಿಮಾ ಮತ್ತು ಕಿರುತೆರೆಯ ಮೂಲಕ ಪರಿಚಿತರಾಗಿದ್ದ ಹರೀಶ್ ಅವರು ಸಂಚರಿಸುತ್ತಿದ್ದ ವಾಹನವು ಕೊಡಗಿನ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಭೀಕರ ಅಪಘಾತಕ್ಕೆ ಈಡಾಗಿದೆ.

Home add -Advt

ಅಪಘಾತದ ತೀವ್ರತೆ ಎಷ್ಟಿತ್ತೆಂದರೆ, ಹರೀಶ್ ಅವರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗುವ ಮೊದಲೇ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಹರೀಶ್ ಅವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. 

Related Articles

Back to top button