
ಪ್ರಗತಿವಾಹಿನಿ ಸುದ್ದಿ: ಮದುವೆ ಸಂಭ್ರಮ ಮುಗಿಸಿ ಮರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿ, ಆರು ಜನ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಹಾಪುರ ಜಿಲ್ಲೆಯ ದೌಲಾನಾ-ಗುಲಾವತಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಮದುವೆ ಮೆರವಣಿಗೆಯ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಸುಮಾರು 12 ಮಂದಿ ಪ್ರಯಾಣಿಕರು ಬಸ್‌ನಲ್ಲಿ ಮನೆಗೆ ಮರಳುತ್ತಿದ್ದರು.
ಈ ವೇಳೆ ವೇಗವಾಗಿ ಬಂದ ಟ್ರಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆರು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಅಪಘಾತದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಿದರು.
ಗಾಯಗೊಂಡಿರುವ ಏಳು ಮಂದಿಯನ್ನು ತಕ್ಷಣವೇ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಕುಟುಂಬದವ ಕುಟುಂಬಸ್ಥರು ಘಟನಾ ಸ್ಥಳ ಮತ್ತು ಆಸ್ಪತ್ರೆಗೆ ಆಗಮಿಸಿದ್ದಾರೆ. ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ.


