Kannada NewsLatestWorld

*ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನ ಕರಾವಳಿ ರಕ್ಷಣಾ ಪಡೆಯ ಗಸ್ತು ದೋಣಿ ಮೇಲೆ ಗುಂಡಿನ ದಾಳಿ: ಮೂವರು ಸಿಬ್ಬಂದಿಗಳು ಸಾವು*

ಭೂಮಿಗೆ ಸೀಮಿತವಾಗಿದ್ದ ಯುದ್ಧ ಸಮುದ್ರಕ್ಕೂ ಆವರಿಸುವ ಭೀತಿ


ಪ್ರಗತಿವಾಹಿನಿ ಸುದ್ದಿ: ಬಲೂಚಿಸ್ತಾನದ ನೆಲದ ಮೇಲೆ ಸರಣಿ ದಾಳಿಗಳನ್ನು ನಡೆಸುತ್ತಿದ್ದ ಬಲೂಚ್ ಪ್ರತ್ಯೇಕತಾವಾದಿಗಳು ಈಗ ತಮ್ಮ ಕಾರ್ಯತಂತ್ರವನ್ನು ಬದಲಿಸಿದ್ದಾರೆ. ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನ ಕರಾವಳಿ ರಕ್ಷಣಾ ಪಡೆಯ ಗಸ್ತು ದೋಣಿಯ ಮೇಲೆ ಉಗ್ರರು ದಾಳಿ ನಡೆಸಿದ್ದು, ಮೂವರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ.

ಕಡಲ ಪ್ರಾಧಿಕಾರದ ಹಡಗಿನ ಮೇಲೆ ನಡೆದ ಇತಿಹಾಸದ ಮೊದಲ ದಾಳಿ ಇದಾಗಿದೆ. ಅರಬ್ಬಿ ಸಮುದ್ರದಲ್ಲಿ ಪಾಕ್ ಕರಾವಳಿ ರಕ್ಷಣಾ ಪಡೆ ಮೇಲೆ ಬಲೂಚ್ ಬಂಡುಕೋರರು ದಾಳಿ ನಡೆಸಿದ್ದು, ಮೂವರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಇದು BLA ಹೊಸ ಸಾಗರ ಕಾರ್ಯತಂತ್ರದ ಭಾಗವಾಗಿದ್ದು, ಗ್ವಾದರ್ ಬಂದರು ಭದ್ರತೆಗೂ ಅಪಾಯ ಎದುರಾಗಿದೆ.

ದಾಳಿಯ ಹಿಂದೆ ಅಫ್ಘಾನಿಸ್ತಾನದ ಕೈವಾಡವಿದೆ ಎಂದು ಪಾಕಿಸ್ತಾನ ಆರೋಪಿಸಿದೆ. ಭೂಮಿಯ ಯುದ್ಧ ಈಗ ಸಮುದ್ರಕ್ಕೂ ವ್ಯಾಪಿಸಿದೆ.

ಪಾಕಿಸ್ತಾನ-ಇರಾನ್ ಗಡಿಯ ಸಮೀಪವಿರುವ ಕರಾವಳಿ ಪ್ರದೇಶದಲ್ಲಿ ಕೋಸ್ಟ್ ಗಾರ್ಡ್ ದೋಣಿಯು ಎಂದಿನಂತೆ ಗಸ್ತು ತಿರುಗುತ್ತಿತ್ತು. ಈ ವೇಳೆ ದೋಣಿಯನ್ನು ಸುತ್ತುವರೆದ ದಂಗೆಕೋರರು ಮನಬಂದಂತೆ ಗುಂಡಿನ ಮಳೆ ನಡೆಸಿದ್ದಾರೆ. ಅನಿರೀಕ್ಷಿತ ದಾಳಿಯಿಂದ ಕಂಗೆಟ್ಟ ಭದ್ರತಾ ಸಿಬ್ಬಂದಿಗಳಿಗೆ ಚೇತರಿಸಿಕೊಳ್ಳಲು ಸಮಯವೇ ಸಿಗಲಿಲ್ಲ. ಪರಿಣಾಮವಾಗಿ ಮೂವರು ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಿಷೇಧಿತ ಸಂಘಟನೆ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA) ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಪಾಕಿಸ್ತಾನಕ್ಕೆ ಅಪಾಯಕಾರಿ ಎಚ್ಚರಿಕೆಯನ್ನು ನೀಡಿದೆ.


Related Articles

Back to top button