Belagavi NewsBelgaum NewsKannada NewsKarnataka NewsLatest

*ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಈ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದೆ.

ಬಾಚಿ:

Home add -Advt

ಬಾಚಿ ಗ್ರಾಮದಲ್ಲಿ ಸುಮಾರು 60 ಲಕ್ಷ ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಬ್ರಹ್ಮಲಿಂಗ ಮಂದಿರದ ನೂತನ ಕಟ್ಟಡ ಕಾಮಗಾರಿಗೆ ಸ್ಥಳೀಯ ಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಈ ವೇಳೆ ಗ್ರಾಮದ ಹಿರಿಯರು, ಸ್ಥಳೀಯ ನಿವಾಸಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಮಂಡೋಳಿ:

ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದಲ್ಲಿ ಸುಮಾರು 55 ಲಕ್ಷ ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಆಯುಷ್ಮಾನ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಈ ವೇಳೆ ಗ್ರಾಮದ ಹಿರಿಯರು, ಗ್ರಾಮಸ್ಥರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.

ಸಂಪರ್ಕ ರಸ್ತೆ:

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಟ್ಟಲವಾಡಿ ಹಾಗೂ ನಾವಗೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು‌.

ಸುಮಾರು 1.40 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣಗೊಳ್ಳಲಿದೆ. ರಸ್ತೆಯ ಗುಣಮಟ್ಟತೆಯನ್ನು ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಈ ವೇಳೆ ಆಯಾ ಗ್ರಾಮಗಳ ಹಿರಿಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Back to top button