Kannada NewsKarnataka NewsLatestPolitics

*ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ: 18 ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ*

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಮಯಯ ಆತ್ಮೀಯವಾಗಿ ಬರಮಾಡಿಕೊಂಡಿದ್ದರು.

ಮಂಡ್ಯ ಜಿಲ್ಲೆಯ ನಾಗಲಮಂಗಲ ತಾಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿಯ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮೀಯವಾಗಿ ಬರಮಾಡಿಕೊಂಡರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೆ ರಾಜ್ಯದ 18 ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು. ಕೆಲ ಕಾಲ ಪ್ರಧಾನಿಯವರೊಂದಿಗೆ ಚರ್ಚೆ ನಡೆಸಿದರು.

ಬಳಿಕ ಪ್ರಧಾನಿ ಮೋದಿ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಆದಿಚುಂಚನಗಿರಿಗೆ ತೆರಳಿದರು. ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಿದ ಬಳಿಕ ಪ್ರಧಾನಿ ಮೋದಿ, ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲಿದ್ದಾರೆ.

Home add -Advt


Related Articles

Back to top button