Kannada NewsKarnataka NewsLatest

*ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮಂಡ್ಯದ ನಾಗಮಂಗಲ ತಾಲೂಕಿನ ಪ್ರಸಿದ್ಧ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ್ದು, ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಿದರು.

ಅಂದಾಜು 100 ಕೋಟಿ ರೂಪಾಯಿ ವೆಚ್ಚದಲ್ಲಿ ಭವ್ಯವಾಗಿ ನಿರ್ಮಿಸಲಾದ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ಈ ಭವ್ಯ ಮಂದಿರ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 71ನೇ ಮಠಾಧೀಶರಾದ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗೆ ಸಮರ್ಪಿತವಾಗಿದೆ.

Home add -Advt

ಸಾಂಪ್ರದಾಯಿಕ ದ್ರಾವಿಡ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಿಸಲಾದ ಮಂದಿರ ದಿವಂಗತ ಶ್ರೀಗಳ ಜೀವನ ಮತ್ತು ಪರಂಪರೆಗೆ ಗೌರವವಾಗಿ ನಿಂತಿದೆ. ಈ ಮಂದಿರವನ್ನು ಶಂಕರ್ ಸ್ತಪತಿ ಎಂಬ ಶಿಲ್ಪಿ ನಿರ್ಮಿಸಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ರೊಂದಿಗೆ ‘ಸೌಂದರ್ಯ ಲಹರಿ ಮತ್ತು ಶಿವ ಮಹಿಮ್ನ ಸ್ತೋತ್ರಂ’ ಎಂಬ ಪುಸ್ತಕವನ್ನು ಜಂಟಿಯಾಗಿ ಬಿಡುಗಡೆ ಮಾಡಿದರು.


Related Articles

Back to top button