ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಸ್ಲೀಪರ್ ಕೋಚ್ ಬಸ್ಸೊಂದು ಏಕಾಏಕಿ ಹೊತ್ತಿ ಉರಿದಿರುವ ಘಟನೆ ಚಿದ್ರದುರ್ಗ ಜಿಲ್ಲೆ ಹಿರಿಯೂರು ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 4ರ ಗಿಡ್ಡೋಬನಹಳ್ಳಿ ಸಮೀಪ ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಇಡೀ ಬಸ್ ಗೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಗೈಲ್ಲ.
ಐಮಂಗಲ ಗೇಟ್ ಬಳಿ ಬಸ್ ಬರುತ್ತಿರುವಾಗ ಬಸ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಹೊಗೆ ಕಂಡು ಚಾಲಕನಿಗೆ ಬೇರೆ ವಾಹನಗಳ ಚಾಲಕರು ತಿಳಿಸಿದ್ದಾರೆ. ಕೂಡಲೇ ಚಾಲಕ ಬಸ್ ನಿಲ್ಲಿಸಿ, ಪ್ರಯಾಣಿಕರನ್ನು ಬಸ್ನಿಂದ ಇಳಿಸಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಬಚಾವಾಗಿದ್ದಾರೆ.
ಬಸ್ಸಿನಲ್ಲಿ ಒಟ್ಟು 30 ಜನ ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ. ಈ ಬಸ್ ಬೆಳಗಾವಿ ಕೆಎಸ್ ಆರ್ಟಿಸಿ ಡಿಪೋ ಗೆ ಸೇರಿದ್ದಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ