
ಪ್ರಗತಿವಾಹಿನಿ ಸುದ್ದಿ: ಮರಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮುಷ್ಟೂರು-ಕಡಬನಕಟ್ಟೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. 45 ವರ್ಷದ ರಘುನಾಥ್ ಮೃತ ಸರ್ಕಲ್ ಇನ್ಸ್ ಪೆಕ್ಟರ್. ರಘುನಾಥ್ ಅವರು ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಡಿಸಿಆರ್ ಇ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಚಿತ್ರದುರ್ಗ ಕಡೆಯಿಂದಜಗಳೂರು ಕಡೆಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



