Belagavi NewsBelgaum NewsKannada NewsKarnataka News

*ರಾಜ್ಯದ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಏಪ್ರಿಲ್ 20ರವರೆಗೂ ವಿವಿಧ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.

Home add -Advt

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಬೆಳಗಾವಿ, ಧಾರವಾಡ, ಹಾವೇರಿ, ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಕೊಪ್ಪಳ, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಉಷ್ಣ ಮಾರುತದ ವಾತಾವರಣ ಇರಲಿದೆ.

ಹಾಗೆಯೇ ಧಾರವಾಡ-ಹಾವೇರಿ ಭಾಗಗಳಲ್ಲಿ ಬಿರುಬಿಸಿಲು ಇರಲಿದೆ. ಇನ್ನು ಶಿವಮೊಗ್ಗ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ, ಒಂದೆರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. 

ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಬಿರುಬಿಸಿಲು ಇರಲಿದ್ದು ಇನ್ನುಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Related Articles

Back to top button